ತುರುವೇಕೆರೆ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹಾಸ್ಯ ನಟ ಟೆನ್ನಿಸ್ ಕೃಷ್ಣ ಸ್ಪರ್ಧಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೆನಿಸ್ ಕೃಷ್ಣ, ಈ ಹಿಂದೆ ಚುನಾವಣೆ ವೇಳೆ ತುರುವೇಕೆರೆ ಕ್ಷೇತ್ರದಲ್ಲಿ ಪ್ರಚಾರ ಮಾಡಿದ ಅನುಭವ ಇದೆ. ಕಾಂಗ್ರೆಸ್, ಬಿಜೆಪಿಯಿಂದ ಆಹ್ವಾನ ಬಂದರೂ ನಾನು ಅಲ್ಲಿಗೆ ಹೋಗಲಿಲ್ಲ. ಎಎಪಿ ಮೂಲಕ ಬಡ ಕಲಾವಿದರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ರಂಗಭೂಮಿ ಕಲಾವಿದರು ಮತ್ತು ಸಿನಿಮಾದಲ್ಲಿನ ಪೋಷಕ ನಟರು ಅಗತ್ಯ ಸೌಲಭ್ಯ ಇಲ್ಲದೆ ಪರದಾಡುತ್ತಿದ್ದಾರೆ. ಅವರಿಗೆ ವಾಸಕ್ಕೆ ಯೋಗ್ಯವಾದ ನಿವಾಸ, ಶೌಚಾಲಯಗಳ ವ್ಯವಸ್ಥೆ ಇಲ್ಲ. ಎಎಪಿ ಮೂಲಕ ಅಗತ್ಯ ಸೌಕರ್ಯಗಳನ್ನು ಒದಗಿಸುವ ಉದ್ದೇಶವಿದೆ. ಕಷ್ಟದಲ್ಲಿರುವ ರಂಗಭೂಮಿ ಕಲಾವಿದರ ಮಕ್ಕಳ ವಿದ್ಯಾಭ್ಯಾಸ, ಕಲಾವಿದರ ಆರೋಗ್ಯಕ್ಕೆ ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡಿದ್ದೇವೆ ಎಂದರು.
ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಸರ್ಕಾರಗಳಿಂದ ಕಲಾವಿದರಿಗೆ ಯಾವುದೇ ನೆರವು ದೊರೆಯುತ್ತಿಲ್ಲ. ಎಲ್ಲ ಪಕ್ಷಗಳಲ್ಲಿ ಇರುವ ಸಿನಿಮಾ ನಟರೂ ಉಳಿದ ಕಲಾವಿದರಿಗೆ ಅಗತ್ಯ ಸೌಲಭ್ಯ ನೀಡಲು ಆಸಕ್ತಿ ತೋರುತ್ತಿಲ್ಲ. ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವುದು ಎಂದು ಹೇಳಿದರು.
ಕಳೆದ ವರ್ಷ ಆಗಸ್ಟ್‌ನಲ್ಲಿ ಟೆನ್ನಿಸ್ ಕೃಷ್ಣ ಎಎಪಿ ಸೇರ್ಪಡೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು.
___

Be the first to comment