“ಪರಿಮಳ ಡಿಸೋಜಾ” ಚಿತ್ರಕ್ಕೆ ಜೋಗಿ ಪ್ರೇಮ್ ಅಮ್ಮನ ಕುರಿತು ಹಾಡು ಹಾಡಿದ್ದಾರೆ.
ಹಾಡನ್ನು ಪ್ರೇಮಕವಿ ಕೆ.ಕಲ್ಯಾಣ್ ಬರೆದಿದ್ದಾರೆ. ಇತ್ತೀಚಿಗೆ ಈ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಕೆ.ಕಲ್ಯಾಣ್, ನಟಿ ಭವ್ಯ, ಜಂಕಾರ್ ಮ್ಯೂಸಿಕ್ ಭರತ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ತಾಯಿ ಬಗ್ಗೆ ಹಾಡು ಬರೆಯಬೇಕೆಂದರೆ ಏನೋ ಒಂಥರ ಖುಷಿ. ಈ ಹಾಡನ್ನು ಪ್ರೇಮ್ ಚೆನ್ನಾಗಿ ಹಾಡಿದ್ದಾರೆ ಎಂದು ಕೆ ಕಲ್ಯಾಣ್ ಹೇಳಿದರು.
ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರದಲ್ಲಿ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಹಾಡು ತುಂಬಾ ಚೆನ್ನಾಗಿದೆ ಎಂದು ಹಿರಿಯ ನಟಿ ಭವ್ಯ ಹೇಳಿದರು.
“ಪರಿಮಳ ಡಿಸೋಜಾ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇಂದು ಅಮ್ಮನ ಹಾಡು ಲಿರಿಕಲ್ ವಿಡಿಯೋ ಬಿಡುಗಡೆಯಾಗಿದೆ. ಹಾಡು ಬರೆದ ಕಲ್ಯಾಣ್ ಅವರಿಗೆ, ಸುಮಧುರವಾಗಿ ಹಾಡಿದ್ದ ಪ್ರೇಮ್ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದು ನಿರ್ಮಾಪಕ ವಿನೋದ್ ಶೇಷಾದ್ರಿ ತಿಳಿಸಿದರು.
ಸಂಗೀತ ನಿರ್ದೇಶಕ ಕ್ರಿಸ್ಟೋಫರ್ ಜೋಸನ್, ಛಾಯಾಗ್ರಾಹಕ ರಾಮು ಇದ್ದರು.
___
Be the first to comment