ನಟ ಅನಂತ್ ನಾಗ್ ಅವರು ನಿನ್ನೆ ನಡೆಯಬೇಕಿದ್ದ ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ನಟ ಅನಂತ್ ನಾಗ್ ಬಿಜೆಪಿ ಸೇರ್ಪಡೆ ವಿಚಾರ ಕುತೂಹಲ ಮೂಡಿಸಿತ್ತು. ಸಾಕಷ್ಟು ಜನ ಅವರ ಈ ನಿರ್ಧಾರವನ್ನು ಸ್ವಾಗತಿಸಿದ್ದರು. ಬಿಜೆಪಿ ನಾಯಕರು ಪಕ್ಷಕ್ಕೆ ಅವರನ್ನು ಸ್ವಾಗತಿಸಲು ಸಿದ್ಧರಾಗಿದ್ದರು. ಆದರೆ ಅನಂತ್ ನಾಗ್ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಹಾಜರಾಗದೇ ಇರುವುದು ಅಚ್ಚರಿ ಮೂಡಿಸಿದೆ.
ಅನಂತ್ ನಾಗ್ ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಬಂದಿಲ್ಲ ಎನ್ನಲಾಗಿದೆ. ಮುಂದಿನ ವಾರ ಕಾರ್ಯಕ್ರಮಕ್ಕೆ ಭಾಗಿ ಆಗಿ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ಅವರು ಬಿಜೆಪಿ ಪಕ್ಷಕ್ಕೆ ಸಂದೇಶ ರವಾನಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ಆಡಳಿತವನ್ನು ಅನಂತ್ ನಾಗ್ ಬೆಂಬಲಿಸುತ್ತಾ ಬಂದಿದ್ದಾರೆ. ಅನಂತ್ ಅವರಿಗೆ ರಾಜಕೀಯ ರೀ ಎಂಟ್ರಿ ಇದಾಗಿದೆ. ಅವರು ದಶಕಗಳ ಹಿಂದೆ ಜೆ. ಹೆಚ್ ಪಟೇಲ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
2004ರಲ್ಲಿ ಜೆಡಿಎಸ್ ಪಕ್ಷದಿಂದ ರಾಮರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಳಿಕ ರಾಜಕೀಯ ಬಿಟ್ಟು ಸಿನಿಮಾಗಳತ್ತ ಮುಖ ಮಾಡಿದ್ದರು.
__
Be the first to comment