Kd: ಕನ್ನಡಕ್ಕೆ ಮರಳಿದ್ದಾರೆ ಶಿಲ್ಪಾ ಶೆಟ್ಟಿ

17 ವರ್ಷಗಳ ನಂತರ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪ್ರೇಮ್ ನಿರ್ದೇಶನ ಕೆಡಿ ಚಿತ್ರದ ಮೂಲಕ ಕನ್ನಡಕ್ಕೆ ಮರಳಲಿದ್ದಾರೆ ಎಂದು ಹೇಳಲಾಗಿದೆ.

ಶಿಲ್ಪಾ ಶೆಟ್ಟಿ 1998ರಲ್ಲಿ ರವಿಚಂದ್ರನ್ ಅವರೊಂದಿಗೆ ಪ್ರೀತ್ಸೋದ್ ತಪ್ಪಾ ಸಿನಿಮಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದರು. ಅದಾದ ನಂತರ 2003 ರಲ್ಲಿ ಒಂದಾಗೋಣ ಬಾ ಹಾಗೂ 2005 ರಲ್ಲಿ ಉಪೇಂದ್ರ ನಟನೆಯ ಆಟೋ ಶಂಕರ್ ಚಿತ್ರದಲ್ಲಿ ನಟಿಸಿದ್ದರು.

ಶಿಲ್ಪಾ ಶೆಟ್ಟಿ ಚಿತ್ರದಲ್ಲಿ ನಟಿಸುವ ಬಗ್ಗೆ ಚಿತ್ರತಂಡ ಶೀಘ್ರ ಮಾಹಿತಿ ನೀಡುವ ನಿರೀಕ್ಷೆ ಹೊಂದಲಾಗಿದೆ.

1968-1978 ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಕೆಡಿ ಸಿನಿಮಾ ತಯಾರಾಗುತ್ತಿದೆ. ಆಕ್ಷನ್ ಸೀಕ್ವೆನ್ಸ್ ಗಳ ಹೊರತಾಗಿ ಚಿತ್ರ ಪ್ರೇಮಕಥೆಯನ್ನು ಹೊಂದಿರುತ್ತದೆ ಎಂದು ಪ್ರೇಮ್ ಹೇಳಿದ್ದಾರೆ.

ಧ್ರುವ ಸರ್ಜಾ ಅಭಿನಯದ ಕೆಡಿ ಸಿನಿಮಾ ಸದ್ಯ ಶೂಟಿಂಗ್ ನಡೆಯುತ್ತಿದೆ. ಅರ್ಜುನ್ ಜನ್ಯ ಕೆಡಿಗೆ ಸಂಗೀತ ನೀಡುತ್ತಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಗಣವನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!