Yuvaratna: ನಾಳೆ ಯುವರತ್ನ ರೀರಿಲೀಸ್

ಅಪ್ಪು ಹುಟ್ಟುಹಬ್ಬದ ಪ್ರಯುಕ್ತ ನಾಳೆ ‘ಯುವರತ್ನ’ ಸಿನಿಮಾ ರೀರಿಲೀಸ್ ಆಗಲಿದೆ.

ಅಪ್ಪು ಹುಟ್ಟುಹಬ್ಬಕ್ಕೆ ಬೆಂಗಳೂರಿನ ಜೆಪಿ ನಗರದ ಸಿದ್ಧಲಿಂಗೇಶ್ವರ ಚಿತ್ರಮಂದಿರ ವಿಶೇಷವಾಗಿ ರೆಡಿಯಾಗಿದೆ. ನಾಳೆ ಅಪ್ಪು ಅಭಿನಯದ `ಯುವರತ್ನ’ ಸಿನಿಮಾವನ್ನು ವಿಶೇಷವಾಗಿ ಉಚಿತ ಪ್ರದರ್ಶನ ಮಾಡಲಾಗುತ್ತಿದೆ.

ಯುವರತ್ನ ಸಿನಿಮಾವನ್ನು ರಾತ್ರಿ 9.30ಕ್ಕೆ ವಿಶೇಷ ಪ್ರದರ್ಶನ ಮಾಡಲಾಗುತ್ತೆ. ಆ ಬಳಿಕ ರಾತ್ರಿ 12 ಗಂಟೆಗೆ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲಾಗುತ್ತದೆ. ಮಾರ್ಚ್ 17ರ ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರವನ್ನು ಅಪ್ಪು ಫ್ಯಾನ್ಸ್ ಹಮ್ಮಿಕೊಂಡಿದ್ದಾರೆ. ಜೆಪಿ ನಗರದ ದೊಡ್ಮನೆ ಅಭಿಮಾನಿಗಳ ಸಂಘ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.

ಅಪ್ಪು ನಟನೆಯ ಕೊನೆಯ ಸಾಕ್ಷ್ಯಚಿತ್ರ `ಗಂಧದಗುಡಿ’ ಮಾರ್ಚ್ 17ರಂದು ಒಟಿಟಿಗೆ ಎಂಟ್ರಿಕೊಡುತ್ತಿದೆ. ಚಿತ್ರ ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗಲಿದೆ.

ಅದೇ ದಿನ `ಕಬ್ಜ’ ಚಿತ್ರ ಕೂಡ ತೆರೆ ಕಾಣುತ್ತಿದ್ದು, ಚಿತ್ರತಂಡವು ಸಿನಿಮಾವನ್ನು ಪುನೀತ್‌ಗೆ ಅರ್ಪಣೆ ಮಾಡಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!