Ramya: ರಾಜ್ಯ ರಾಜಕಾರಣಕ್ಕೆ ರಮ್ಯಾ ರಿ ಎಂಟ್ರಿ?!

ರಾಜ್ಯ ರಾಜಕಾರಣಕ್ಕೆ ಚಿತ್ರನಟಿ ರಮ್ಯಾ ರಿ ಎಂಟ್ರಿ ಕೊಡಲಿದ್ದಾರೆ ಎನ್ನುವ ಸುದ್ದಿ ಕೇಳಿ ಬಂದಿದೆ.

ಬೆಂಗಳೂರಿನ ಪದ್ಮನಾಭನಗರ ಅಥವಾ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಮ್ಯಾ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ನಡುವೆ ಪೈಪೋಟಿ ಇದೆ. ಇಲ್ಲಿ ನಾಯ್ಡು ಸಮೂದಾಯದ ವ್ಯಕ್ತಿ ಅಭ್ಯರ್ಥಿಯಾದರೆ ಒಕ್ಕಲಿಗ ಮತ ಸೆಳೆಯಲು ಕಷ್ಟವಾಗಲಿದೆ. ಒಕ್ಕಲಿಗ ಮತ್ತು ಅಹಿಂದ ಮತ ಲೆಕ್ಕಾಚಾರದಲ್ಲಿ ರಮ್ಯಾ ಸೂಕ್ತ ಅನ್ನೋ ಮಾತು ಕೇಳಿಬರುತ್ತಿದೆ. ಹೀಗಾಗಿ ರಮ್ಯಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಜೊತೆಗೆ ಸಚಿವ ಆರ್.ಅಶೋಕ ವಿರೋಧಿ‌ ಮತಗಳ ಕ್ರೋಢಿಕರಣದ ಲೆಕ್ಕಾಚಾರ ಮಾಡಲಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿಯಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಠಕ್ಕರ್‌ ನೀಡಿ ಒಕ್ಕಲಿಗ ಮತಗಳನ್ನು ಸೆಳೆಯಲು ರಮ್ಯಾ ಅವರನ್ನು ಸ್ಪರ್ಧೆಗಿಳಿಸಲು ಚಿಂತನೆ ಮಾಡಲಾಗಿದೆ. ಕಾಂಗ್ರೆಸ್ ಪಾಳಯದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚೆಯನ್ನು ಮಾಡಲಾಗುತ್ತಿದೆ.

ಶೀಘ್ರದಲ್ಲೇ ಈ ಕುರಿತು ಅಂತಿಮ‌ ನಿರ್ಧಾರಗಳು ಪ್ರಕಟವಾಗಲಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.

ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಮ್ಯಾ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೂ ಚರ್ಚೆಯಾಗಿತ್ತು. ಈ ಬಗ್ಗೆ ಚರ್ಚೆ ಕೇಳಿ ಬರುತ್ತಿದೆ. ಕೆಲ ದಿನಗಳಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!