kabzaa: ಅಮೆಜಾನ್ ಪ್ರೈಮ್ ನಲ್ಲಿ ‘ಕಬ್ಜ’

ಆರ್‌.ಚಂದ್ರು ನಿರ್ಮಾಣ ಮತ್ತು ನಿರ್ದೇಶನದ, ಉಪೇಂದ್ರ, ಸುದೀಪ್‌ ನಟನೆಯ ‘ಕಬ್ಜ’ ಚಿತ್ರ ಏ.14ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಪ್ರಸಾರವಾಗಲಿದೆ ಎನ್ನಲಾಗುತ್ತಿದೆ.

ಮಾ.17ರಂದು 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಕಬ್ಜ ಬಿಡುಗಡೆಯಾಗಿತ್ತು. ಕಬ್ಜ ಸಿನಿಮಾ ರಿಲೀಸ್‌ ಆದ ಒಂದೇ ತಿಂಗಳಿಗೆ ಒಟಿಟಿಗೆ ಬರುವ ಮೂಲಕ ಇನ್ನಷ್ಟು ಸಿನಿ ಪ್ರೇಮಿಗಳ ಮನಸ್ಸು ಗೆಲ್ಲುವುದಕ್ಕೆ ಮುಂದಾಗಿದೆ.

ಕಬ್ಜ 2ಬಗ್ಗೆ ಈಗಾಗಲೇ ಚರ್ಚೆಗಳು ಆಗುತ್ತಿವೆ. ದಕ್ಷಿಣದ ಮತ್ತು ಬಾಲಿವುಡ್ ತಾರೆಯರು ಕೂಡ ಈ ಚಿತ್ರಕ್ಕಾಗಿ ಒಂದಾಗಲಿದ್ದಾರೆ ಎನ್ನುವ ಮಾಹಿತಿ ಕೂಡ ಹರಿದಾಡುತ್ತಿದೆ.

ಈ ಕುರಿತು ಮಾಧ್ಯಮಕ್ಕೆ ಚಂದ್ರು ಮಾತನಾಡಿ, ‘ಕಬ್ಜ 2 ಅದ್ಧೂರಿಯಾಗಿ ಮತ್ತು ಭಾರೀ ಬಜೆಟ್ ನಲ್ಲಿ ನಿರ್ಮಾಣ ಆಗುವುದು ಸತ್ಯ. ಕಥೆ ಮತ್ತು ಕಲಾವಿದರ ಬಗ್ಗೆ ಸದ್ಯಕ್ಕೆ ಏನೂ ಅಂದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಖಂಡಿತ ಎಲ್ಲದರ ಕುರಿತು ಮಾತನಾಡುತ್ತೇನೆ’ ಎಂದಿದ್ದಾರೆ.

ಕತಾರ್‌ನಲ್ಲಿ 11ಕ್ಕಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ಯಶಸ್ಸಿಯಾಗಿ ಪ್ರದರ್ಶನ ಕಾಣುತ್ತಿರುವ ಮೊದಲ ಕನ್ನಡ ಸಿನಿಮಾ ‘ಕಬ್ಜ’ ಎನ್ನಲಾಗುತ್ತಿದೆ.

 ಚಿತ್ರದಲ್ಲಿ ಉಪೇಂದ್ರ, ಸುದೀಪ್‌, ಶಿವಣ್ಣ, ಶ್ರೀಯಾ ಶರಣ್​, ಕಬೀರ್ ದುಹಾನ್​ ಸಿಂಗ್​, ಪ್ರಮೋದ್​ ಶೆಟ್ಟಿ, ನವಾಬ್​ ಷಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ವಿತರಣಾ ಹಕ್ಕನ್ನು ಲೈಕಾ ಪ್ರೊಡಕ್ಷನ್‌ ಸಂಸ್ಥೆ ಹಲವಾರು ಕೋಟಿ ರೂ. ಕೊಟ್ಟು ಖರೀದಿಸಿದೆ.

 ‘ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಎಜೆ ಶೆಟ್ಟಿ ಅವರು ಛಾಯಾಗ್ರಹಣ ಕೆಲಸ ಮಾಡಿದ್ದರೆ, ‘ಕೆಜಿಎಫ್’ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಮಾಡಿದ್ದಾರೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!