ರಾಜಾಹುಲಿ ಸಿನಿಮಾದಲ್ಲಿ ಯಶ್ ಗೆಳೆಯನ ಪಾತ್ರದಲ್ಲಿ ನಟಿಸಿದ್ದ ಹರ್ಷ ತಮಗೆ ಅಸಭ್ಯವಾಗಿ ಸಂದೇಶ ಕಳಿಸಿದ್ದಾರೆ ಎಂದು ಪೆಂಟಗನ್ ಸಿನಿಮಾದ ನಟಿ ತನಿಷಾ ಕುಪ್ಪಂಡ ಆರೋಪಿಸಿ ಮತ್ತೆ ಸುದ್ದಿಯಾಗಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಬರೆದ ಸ್ಟೋರಿಗೆ ರಿಪ್ಲೈ ಮಾಡಿರುವ ಹರ್ಷ, ನೀಲಿ ಚಿತ್ರಗಳಲ್ಲಿ ನಟಿಸುತ್ತೀಯ? ಎಂದು ಸ್ಮೈಲಿ ಇಮೇಜಿನೊಂದಿಗೆ ಸಂದೇಶ ಕಳಿಸಿದ್ದಾನೆ ಎಂದು ಕಣ್ಣೀರು ಇಟ್ಟಿದ್ದಾರೆ.
ಪೆಂಟಗನ್ ಸಿನಿಮಾದ ಸಂದರ್ಶನಕ್ಕೆಂದು ಬಂದ ಯೂಟ್ಯೂಬರ್ ತನಿಷಾ ಅವರಿಗೆ ನೀವು ಅಶ್ಲೀಲ ಸಿನಿಮಾಗಳಲ್ಲಿ ನಟಿಸಲು ಸಿದ್ದರಿದ್ದೀರಾ ಎಂದು ಅಸಭ್ಯ ಪ್ರಶ್ನೆ ಕೇಳಿ ವಿವಾದ ಸೃಷ್ಟಿಯಾಗಿತ್ತು. ಇದನ್ನು ಪ್ರತಿಭಟಿಸಿ ತನಿಷಾ ಯೂಟ್ಯೂಬರ್ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ಮಾತನಾಡಲು ಕರೆದ ಸುದ್ದಿಗೋಷ್ಠಿಯಲ್ಲಿ ನಟಿ ಕಣ್ಣೀರು ಇಟ್ಟಿದ್ದಾರೆ.
ಯೂಟ್ಯೂಬರ್ ಮಾಡಿದ ಕೃತ್ಯದಿಂದ ತಮಗೆ ಆಗಿರುವ ನೋವಾಗಿದೆ. ಅವನಾದರೂ ಹೊರಗಿನವ. ಅವನಿಂದಾಗಿ ಈಗ ನಮ್ಮವರೇ ನನ್ನನ್ನು ಕೆಟ್ಟದಾಗಿ ನೋಡುವಂತಾಗಿದೆ. ಸಹನಟನೇ ಒಬ್ಬ ನನ್ನನ್ನು ಬ್ಲೂ ಫಿಲಂನಲ್ಲಿ ನಟಿಸುತ್ತೀಯಾ ಎಂದು ಕೇಳಿ ಮೆಸೇಜ್ ಮಾಡಿದ್ದಾನೆ ಎಂದು ಕಣ್ಣೀರಿಟ್ಟರು.
ಪತ್ರಕರ್ತರು ಯಾರು ಮೆಸೇಜ್ ಮಾಡಿದ್ದು ಎಂದಾಗ, ಮೊದಲಿಗೆ, ಆತ ಗುರುದೇಶಪಾಂಡೆ ಸಿನಿಮಾದಲ್ಲಿ ನಟಿಸಿದ್ದಾನೆ ಎಂದಷ್ಟೆ ನಟಿ ಹೇಳಿದರು. ಬಳಿಕ ಪತ್ರಕರ್ತರು ಒತ್ತಾಯ ಮಾಡಿದಾಗ ಹರ್ಷ ಹೆಸರು ಹೇಳಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ನಾನು ಹಾಕಿದ್ದ ಸ್ಟೋರಿಗೆ ಪ್ರತಿಕ್ರಿಯೆ ನೀಡಿ, ಬ್ಲೂ ಫಿಲಂನಲ್ಲಿ ನಟಿಸಿದ್ದೀಯ ಎಂದು ಮೆಸೇಜ್ ಮಾಡಿದ್ದಾನೆ, ಅದಕ್ಕೆ ಸ್ಮೈಲಿ ಇಮೇಜು ಬೇರೆ ಹಾಕಿದ್ದಾನೆ. ನಾನು ಗೆಳೆಯರು ಎಂದುಕೊಂಡವರೇ ಹೀಗೆ ಕೀಳಾಗಿ ನೋಡುತ್ತಿದ್ದಾರೆ ಎಂದು ತನಿಷಾ ಭಾವುಕರಾಗಿದ್ದಾರೆ.

Be the first to comment