‘ಸ್ವಾತಿ ಮುತ್ತಿನ ಮಳೆ ಹನಿಯೆ’ ಸಿನಿಮಾ ಶೀರ್ಷಿಕೆ ವಿವಾದ ಪ್ರಕರಣದಲ್ಲಿ ನಟಿ ರಮ್ಯಾ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ.
ಮ್ಯಾ ಅವರ ಮೊದಲ ನಿರ್ಮಾಣ ಮತ್ತು ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾ ಟೈಟಲ್ ವಿವಾದಕ್ಕೆ ಕಾರಣವಾಗಿತ್ತು. ಸಿಟಿ ಸಿವಿಲ್ ನ್ಯಾಯಾಲಯ, ರಮ್ಯಾ ಅವರ ಆಪಲ್ ಬಾಕ್ಸ್ ಸ್ಟುಡಿಯೋಸ್ ಪರವಾಗಿ ತೀರ್ಪು ನೀಡಿ ಚಿತ್ರಕ್ಕೆ ಅದೇ ಶೀರ್ಷಿಕೆಯನ್ನು ಬಳಸಲು ಅವಕಾಶ ಮಾಡಿಕೊಟ್ಟಿದೆ.
ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ರಮ್ಯಾ ತಮ್ಮ ಚಿತ್ರಕ್ಕೆ ಈ ಶೀರ್ಷಿಕೆಯನ್ನು ಬಳಸದಂತೆ ನ್ಯಾಯಾಲಯಕ್ಕೆ ಮನವಿ ಮಾಡಿ ತಡೆಯಾಜ್ಞೆಯನ್ನು ತಂದಿದ್ದರು. ಅದನ್ನು ನ್ಯಾಯಾಲಯ ತೆಗೆದು ಹಾಕಿದೆ.
ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದ ನಟಿ ರಮ್ಯಾ ಅವರು ನಿರ್ಮಾಪಕಿಯಾಗಿ ಮತ್ತೆ ಎರಡನೇ ಇನಿಂಗ್ಸ್ ಆರಂಭಿಸಿದ್ದರು. ಸ್ವಾತಿ ಮುತ್ತಿನ ಮಳೆ ಹನಿ, ರೊಮ್ಯಾಂಟಿಕ್ ಎಂಟರ್ಟೈನರ್ ಎಂದು ಹೇಳಲಾಗಿದೆ.
ರಾಜ್ ಬಿ ಶೆಟ್ಟಿ ಜೊತೆ ಸಿರಿ ರವಿಕುಮಾರ್ ನಟಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರ ಏಪ್ರಿಲ್ 15 ರೊಳಗೆ ಸಿದ್ಧವಾಗುವ ನಿರೀಕ್ಷೆಯಿದೆ. ಚಿತ್ರತಂಡ ಚಬಿಡುಗಡೆಯ ದಿನಾಂಕ ಶೀಘ್ರ ಪ್ರಕಟಿಸುವ ನಿರೀಕ್ಷೆ ಇದೆ.
ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾದಲ್ಲಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆಪಿ ತುಮ್ಮಿನಾಡ್ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರಕ್ಕೆ ಮಿಧುನ್ ಮುಕುಂದನ್ ಅವರ ಸಂಗೀತ, ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ, ಮತ್ತು ಸಂಕಲನ ಇದೆ.
—–

Be the first to comment