Sudeep: ಸುದೀಪ್‌ ಚಿತ್ರಗಳ ಪ್ರದರ್ಶನಕ್ಕೆ ತಡೆ ಇಲ್ಲ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ನಟ ಸುದೀಪ್ ಅವರಿರುವ ಸಿನಿಮಾ, ಟಿವಿ ಶೋಗಳು, ಜಾಹೀರಾತುಗಳ ಪ್ರದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ.

ಮಾದರಿ ನೀತಿ ಸಂಹಿತೆಯ ಅಡಿಯಲ್ಲಿ ಯಾವುದೇ ಪ್ರಸಾರವನ್ನು ನಿಷೇಧಿಸುವ ಕಾನೂನು ಇಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಚುನಾವಣೆಗೆ ಸ್ಪರ್ಧಿಸುವ ಅಥವಾ ಸಾರ್ವಜನಿಕ ಹಣದಿಂದ ದೂರದರ್ಶನದಲ್ಲಿ ಪ್ರಚಾರ ಮಾಡುವ ನಟರನ್ನು ಮಾತ್ರ ವಾಣಿಜ್ಯ ಪ್ರದರ್ಶನದಿಂದ ನಿರ್ಬಂಧಿಸಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಏಪ್ರಿಲ್ 5ರ ಬುಧವಾರದಂದು ಸುದೀಪ್ ಘೋಷಿಸಿದ್ದಾರೆ. ಚುನಾವಣೆಗಳು ಮುಗಿಯುವವರೆಗೆ ಸುದೀಪ್ ನಟನೆಯ ಚಿತ್ರಗಳು, ಕಾರ್ಯಕ್ರಮಗಳು ಮತ್ತು ಜಾಹೀರಾತುಗಳ ಪ್ರದರ್ಶನ ಮತ್ತು ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು.

ಸುದೀಪ್ ಅವರು ಬೊಮ್ಮಾಯಿ ಪರ ಬೆಂಬಲು ನೀಡುವ ಇಂಗಿತವನ್ನು ಘೋಷಿಸಿದ ಹಿನ್ನೆಲೆಯಲ್ಲಿ ಅವರ ಅಭಿನಯದ ಜಾಹೀರಾತು, ಸಿನಿಮಾ, ಟಿವಿ ಶೋ ಪ್ರದರ್ಶನವನ್ನು ಕರ್ನಾಟಕದಲ್ಲಿ ನಿರ್ಬಂಧಿಸುವಂತೆ ಕೋರಿ ಜನತಾ ದಳ ಪಕ್ಷ  ಚುನಾವಣಾ ಆಯೋಗದ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿತ್ತು.

2023 ರ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕ ಸುದೀಪ್‌ ಆಗಿದ್ದಾರೆ. ಮುಂಬರುವ ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಇದು ಮತದಾರರ ಮೇಲೆ ಪ್ರಭಾವ ಬೀರಬಹುದು ಎಂದು ಪಕ್ಷ ವಾದಿಸಿತ್ತು.

ಮೇ 10 ರ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಗುರುತಿಸಿರುವ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಸುದೀಪ್‌ ಅವರು ಏಪ್ರಿಲ್ 5 ರಂದು ಘೋಷಿಸಿದ್ದರು.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!