kishore: ಚೇತನ್ ಬೆಂಬಲಕ್ಕೆ ನಿಂತ ಕಿಶೋರ್‌

ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅವರ ವೀಸಾ ರದ್ದು ಮಾಡಿರುವ ಕೇಂದ್ರ ಸರಕಾರದ ನಡೆಯ ಬಗ್ಗೆ ಬಹುಭಾಷಾ ನಟ ಕಿಶೋರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಕಿಶೋರ್ ಅವರು ಇದು ಸರಕಾರದ ಅತಿರೇಕದ ನಡೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇನ್ಸ್ಟಾಗ್ರಾಮನಲ್ಲಿ ಈ ಬಗ್ಗೆ ಬರೆದಿರುವ ಕಿಶೋರ್, ‘ಹಿಂದುತ್ವ ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ. ಹಿಂದುತ್ವ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿದೆಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ” ಎಂದಿದ್ದಾರೆ.

“ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ? ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ? ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು” ಎಂದು ನಟ ಕಿಶೋರ್ ಬರೆದಿದ್ದಾರೆ.
—-

Be the first to comment

Leave a Reply

Your email address will not be published. Required fields are marked *

Translate »
error: Content is protected !!