Vikram Ravichandran: ವಿಕ್ರಮ್ ರವಿಚಂದ್ರನ್ ಸಿನಿಮಾ ಶೀರ್ಷಿಕೆ ಫೈನಲ್‌

ವಿ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಅವರ ಸಿನಿಮಾಗೆ ಮಧೋಳ್ ಎಂಬ ಶೀರ್ಷಿಕೆ ಇಡಲಾಗಿದೆ.

ಬೆಂಗಳೂರಿನ ನವರಂಗ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ನಡುವೆ ವಿಕ್ರಮ್ ರವಿಚಂದ್ರನ್ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಟೈಟಲ್ ಟೀಸರ್ ಮೂಲಕ ಎಂಟ್ರಿ ಕೊಟ್ಟ ವಿಕ್ರಮ್ ರವಿಚಂದ್ರನ್ ಕಂಪ್ಲೀಟ್ ಗ್ಯಾಂಗ್ ಸ್ಟಾರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ಮುಧೋಳ್ ಎಂಬ ಟೈಟಲ್ ಕೊಟ್ಟಿದ್ದೇ ರವಿಚಂದ್ರನ್. ತ್ರಿವಿಕ್ರಮ್ ಸಿನಿಮಾ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ವಿಕ್ರಮ್ ರವಿಚಂದ್ರನ್ ಈ ಬಾರಿ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಮೂಲಕ ಸಿನಿರಸಿಕರನ್ನು ರಂಜಿಸಲು ಬರುತ್ತಿದ್ದಾರೆ.

ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಮೊದಲ ನಿರ್ದೇಶನ. ಎಸ್.ತಮನ್ ಜತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಂದ್ರನ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ.

ಟಗರು, ಸಲಗ ಸಿನಿಮಾ ಖ್ಯಾತಿಯ ಮಾಸ್ತಿ ಅವರ ಸಂಭಾಷಣೆ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಡಾ.ಕೆ.ರವಿವರ್ಮಾ ಆಯಕ್ಷನ್ ಚಿತ್ರಕ್ಕಿದೆ. ತಂಡವ್ ಸ್ಟುಡಿಯೋಸ್ ಬ್ಯಾನರ್ ನಡಿ ರಕ್ಷಾ ವಿಜಯಕುಮಾರ್ ಹಾಗೂ ಸಿಲ್ಜು ಕಣ್ಣನ್ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರದಲ್ಲಿ ಲವ್ ಮಾಕ್ಟೇಲ್ ಖ್ಯಾತಿ ಅಭಿಲಾಷ್‌, ರಘು ಮ್ಯೂಟಂಟ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಈಗಾಗಲೇ 30 ದಿನ ಚಿತ್ರೀಕರಣ ಕಂಪ್ಲೀಟ್ ಆಗಿದೆ.
——

Be the first to comment

Leave a Reply

Your email address will not be published. Required fields are marked *

Translate »
error: Content is protected !!