Naresh Pavitra: ʻಮತ್ತೆ ಮದುವೆʼ ಸಿನಿಮಾದ ಮೊದಲ ಹಾಡು ಬಿಡುಗಡೆ

ತೆಲುಗು ನಟ ನರೇಶ್ ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ನಟನೆಯ ʻಮತ್ತೆ ಮದುವೆʼ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ.

ಟೀಸರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರ ʻಉರುಳೋ ಕಾಲವೇʼ ಹಾಡು ಬಿಡುಗಡೆ ಮಾಡಿದೆ. ರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿರುವ ಹಾಡಿಗೆ ಸಂತೋಷ್ ವೆಂಕಿ ದನಿಯಾಗಿದ್ದಾರೆ.

ʻಮತ್ತೆ ಮದುವೆʼ ಸಿನಿಮಾ ವಿಜಯ ಕೃಷ್ಣ ಮೂವೀಸ್ ಬ್ಯಾನರ್‌ನಡಿ ನಿರ್ಮಾಣವಾಗಿದೆ. ಚಿತ್ರಕ್ಕೆ ಎಂ. ಎಸ್. ರಾಜು ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಜಯಸುಧ ಮತ್ತು ಶರತ್ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ.

ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ʻಮತ್ತೆ ಮದುವೆʼ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರುತ್ತಿದ್ದು, ಮೇ ತಿಂಗಳಲ್ಲಿ ತೆರೆಗೆ ಬರಲಿದೆ.

ಹೊಸ ವರ್ಷದಂದು ಪವಿತ್ರಾ ಲೋಕೇಶ್ ಹಾಗೂ ನರೇಶ್‌ ಲಿಪ್‌ ಕಿಸ್‌ ಮಾಡಿಕೊಂಡಿರುವ ವಿಡಿಯೊ ಹಂಚಿಕೊಂಡಿದ್ದರು. ಅದೊಂದು ಮದುವೆಯ ಆಮಂತ್ರಣ ಎನ್ನುವಂತೆ ವಿಡಿಯೊ ಮಾಡಿದ್ದರು. ಈ ವಿಡಿಯೊ ರಿಲೀಸ್ ಆಗಿ ಕೆಲವು ದಿನಗಳ ನಂತರ ಅದೊಂದು ಸಿನಿಮಾ ಪ್ರಚಾರಕ್ಕಾಗಿ ಮಾಡಿರುವ ವಿಡಿಯೊ ಎಂದು ಹೇಳಲಾಯಿತು. ಈ ವಿಚಾರವಾಗಿ ನರೇಶ್ ಪತ್ನಿ ರಮ್ಯಾ ಗರಂ ಕೂಡ ಆದರು. ಆದರೆ ಅದು ‘ಮತ್ತೆ ಮದುವೆ’ ಸಿನಿಮಾದ ದೃಶ್ಯವೆಂದು ಟೀಸರ್‌ ಮೂಲಕ ಕೆಲ ದಿನಗಳ ನಂತರ ಖಚಿತವಾಯಿತು.

https://youtu.be/TgVCYWX6Ztg
——

Be the first to comment

Leave a Reply

Your email address will not be published. Required fields are marked *

Translate »
error: Content is protected !!