bera: ಮೇ ತಿಂಗಳಲ್ಲಿ ʼಬೇರʼ ತೆರೆಗೆ

ಭಿನ್ನ ಹೆಸರಿನ ʼಬೇರʼ ಎನ್ನುವ ಟೈಟಲ್ ಇರುವ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ.

ಮೇ ತಿಂಗಳ ಅಂತ್ಯದೊಳಗೆ ಚಿತ್ರ ರಿಲೀಸ್ ಆಗುವ ಸಾಧ್ಯತೆ ಇದೆ. ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸಿನಿಮಾ ಬಗೆಗಿನ ನಿರೀಕ್ಷೆಯನ್ನ ದುಪ್ಪಟ್ಟು ಮಾಡಿದೆ.

ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ “ಬೇರ” ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪದಾರ್ಪಣೆ ಮಾಡಿದ್ದಾರೆ. ಎಸ್‌ಎಲ್‌ವಿ ಕಲರ್ಸ್ ಬ್ಯಾನರ್‌ನಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ತುಳುವಿನಲ್ಲಿ ಬೇರ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ. ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ? ಯಾವ ತಾಯಿಯ ಮುಂದೆಯೂ ಮಕ್ಕಳು ಸಾಯಬಾರದು ಎಂಬುದೇ ಕಥಾಹಂದರ ಎಂದು ನಿರ್ದೇಶಕರು ಹೇಳಿದ್ದಾರೆ.

ಈ ಚಿತ್ರದಲ್ಲಿ ನಾಯಕ, ನಾಯಕಿ ಅಂತ ಇಲ್ಲ. ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತದೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದೇವೆ. ಮೇ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ರಾಜಶೇಖರ್ ಛಾಯಾಗ್ರಹಣ ಮಾಡಿರುವ ಈ ಚಿತ್ರಕ್ಕೆ ರಾಮದಾಸ ಶೆಟ್ಟಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಈ ಚಿತ್ರದಲ್ಲಿ ದತ್ತಣ್ಣ, ಯಶ್ ಶೆಟ್ಟಿ, ಹರ್ಷಿಕಾ ಪೂಣಚ್ಛ, ಅಶ್ವಿನ್ ಹಾಸನ್, ಚಿತ್ಕಳಾ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್ ಮುಂತಾದವರು ನಟಿಸಿದ್ದಾರೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!