daredevil mustafa: ʼಡೇರ್ ಡೆವಿಲ್ ಮುಸ್ತಫಾ’ ಮೇ 19ಕ್ಕೆ ರಿಲೀಸ್

ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳಿಂದಲೇ ತಯಾರಾಗಿರುವ ʼಡೇರ್ ಡೆವಿಲ್ ಮುಸ್ತಫಾ’ ಮೇ 19ಕ್ಕೆ ರಿಲೀಸ್ ಆಗಲಿದೆ.

ಧನಂಜಯ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ವಿತರಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಫಟಿಂಗ ಎಂಬ ಜನಪ್ರಿಯ ಕಿರುಚಿತ್ರ ನಿರ್ದೇಶಿಸಿದ್ದ ಶಶಾಂಕ್ ಸೋಗಾಲ್ ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಡೇರ್ ಡೆವಿಲ್ ಮುಸ್ತಫಾ ಸಿನಿಮಾದ ನಿನ್ನಂಥೋರ್ ಯಾರೂ ಇಲ್ವಲ್ಲೋ ಹಾಡು ಸೂಪರ್ ಹಿಟ್ ಲಿಸ್ಟ್ ಸೇರಿದೆ. ಅಣ್ಣಾವ್ರ ಅನಿಮೇಷನ್ ಮೂಲಕ ಗಮನಸೆಳೆದಿರುವ ಈ ಗಾನಲಹರಿಗೆ ವಾಸುಕಿ ವೈಭವ್ ಹಾಗೂ ಸಿದ್ದಾರ್ಥ್ ಬೆಳ್ಮಣ್ಣು ಧ್ವನಿಯಾಗಿದ್ದಾರೆ.

ಆನಿಮೇಷನ್‌ ಹಾಡಿನ ಮೂಲಕ ಗಮನ ಸೆಳೆದಿರುವ ಡೇರ್ ಡೆವಿಲ್ ಮುಸ್ತಫಾ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿದೆ. ಯೂಟ್ಯೂಬ್ ಸೆನ್ಸೇಷನ್ ಸ್ಟಾರ್ ಡಾ.ಬ್ರೋ ವಾಯ್ಸ್ ನಿಂದ ಪೂಚಂತೇ ಪ್ರಪಂಚ ಪರಿಚಯ ಮಾಡಿಕೊಡಲಾಗಿದೆ. ಬಾಲ್ಯದ ಆಟ ಪಾಠ ತುಂಟಾಟದ ಡೇರ್ ಡೆವಿಲ್ ಮುಸ್ತಫಾ ಮೊದಲ ನೋಟ ನೋಡುಗರಿಗೆ ಇಂಪ್ರೆಸ್ ಮಾಡುತ್ತಿದೆ.


—–

Be the first to comment

Leave a Reply

Your email address will not be published. Required fields are marked *

Translate »
error: Content is protected !!