pepe: ಜೋರಾಗಿದೆ ವಿನಯ್‌ ರಾಜ್‌ಕುಮಾರ್‌ ‘ಪೆಪೆ’ ಲುಕ್‌

ವಿನಯ್‌ ರಾಜ್‌ಕುಮಾರ್‌ ಜನ್ಮದಿನದ ವೇಳೆ ಅವರ ಮುಂದಿನ ಚಿತ್ರ ‘ಪೆಪೆ’ ಟೀಸರ್‌ ಬಿಡುಗಡೆಯಾಗಿದೆ.

ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ಮೂಡಿಬಂದಿರುವ ಟೀಸರ್ ಝಲಕ್‌ನಲ್ಲಿ ವಿನಯ್ ರಾಜ್‌ಕುಮಾರ್ ರಗಡ್ ಲುಕ್‌ನಲ್ಲಿ ಮಿಂಚಿದ್ದಾರೆ. ಇದು ಗ್ಯಾಂಗ್‌ಸ್ಟರ್‌ ಸಿನಿಮಾ ಆಗಿದ್ದು, ವಿನಯ್ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರತಂಡ ಸದ್ಯ ಚಿತ್ರೀಕರಣ ಪೂರ್ಣಗೊಳಿಸಿದೆ. ಪೋಸ್ಟ್‌ ಪ್ರೊಡಕ್ಷನ್‌ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಶ್ರೀಲೇಶ್‌ ಎಸ್‌. ನಾಯರ್‌ ನಿರ್ದೇಶನದ ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದಾರೆ. ಮಯೂರ್ ಪಟೇಲ್, ಯಶ್ ಶೆಟ್ಟಿ, ಬಾಲ ರಾಜ್‌ವಾಡಿ, ಮೆದಿನಿ ಕೆಳಮನಿ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್ ತಾರಾಬಳಗದಲ್ಲಿದ್ದಾರೆ.

ಚಿತ್ರಕ್ಕೆ ಅಭಿಷೇಕ್ ಜಿ. ಕಾಸರಗೋಡು ಛಾಯಾಚಿತ್ರಗ್ರಹಣ, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ, ಡಾ. ರವಿವರ್ಮಾ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಸಾಹಸ ದೃಶ್ಯಗಳ ನಿರ್ದೇಶನ ಮಾಡಿದ್ದಾರೆ.

ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರದಲ್ಲಿ ‘ಪೆಪೆ’ ಸಿನಿಮಾದ ಚಿತ್ರೀಕರಣ ನಡೆದಿದೆ. ಉದಯ್ ಸಿನಿ ವೆಂಚರ್, ದೀಪ ಫಿಲ್ಮ್ಸ್‌ ಬ್ಯಾನರ್‌ನಡಿ ಉದಯ್ ಶಂಕರ್ ಮತ್ತು ಶ್ರೀರಾಮ್ ಬಿ.ಎಂ. ಕೋಲಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!