Megha shetty: ‘ಜೊತೆ ಜೊತೆಯಲಿ’ ಧಾರಾವಾಹಿಗೆ ವಿದಾಯ ಹೇಳಿದ ಮೇಘಾ ಶೆಟ್ಟಿ

ಝೀ ಕನ್ನಡದಲ್ಲಿ ಮೂಡಿ ಬರುತ್ತಿರುವ ಆರೂರು ಜಗದೀಶ್ ನಿರ್ದೇಶನದ ‘ಜೊತೆ ಜೊತೆಯಲಿ’ ಧಾರಾವಾಹಿಗೆ ನಟಿ ಮೇಘಾ ಶೆಟ್ಟಿ ವಿದಾಯ ಹೇಳಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿ ಮುಗಿಯುತ್ತಿರುವ ಬಗ್ಗೆ ಪ್ರಶ್ನೆ ಹುಟ್ಟಿಕೊಂಡಿದೆ. ಈ ಬಗ್ಗೆ ಬರೆದುಕೊಂಡಿರುವ ಮೇಘಾ ಶೆಟ್ಟಿ, ಇದೊಂದು ರೀತಿಯಲ್ಲಿ ಕುಟುಂಬವನ್ನು ತೊರೆದಂತೆ ನೋವು ಆಗುತ್ತಿದೆ ಎಂದಿದ್ದಾರೆ.

ಧಾರಾವಾಹಿ ಈಗ ಅಂತಿಮ ದೃಶ್ಯಗಳನ್ನು ಚಿತ್ರೀಕರಿಸುತ್ತಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಮೇಘಾ ನಿರ್ವಹಿಸುತ್ತಿದ್ದ ಪಾತ್ರವೂ ಕೊನೆಗೊಂಡಿದೆ. ಜೊತೆ ಜೊತೆಯಲಿ ಧಾರಾವಾಹಿ ಮುಗಿಯುತ್ತಿದ್ದಂತೆಯೇ ಮೇಘಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಜೊತೆ ಜೊತೆಯಲಿ ಧಾರಾವಾಹಿ ನಟಿ ಮೇಘಾ ಶೆಟ್ಟಿ ಅವರ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್ ನೀಡಿತ್ತು. ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಧಾರಾವಾಹಿಯು ಅಪಾರ ಅಭಿಮಾನಿಗಳನ್ನು ಹೊಂದಿತ್ತು. ಧಾರಾವಾಹಿ ಅನಿರುದ್ಧ ಜತ್ಕರ್ ಅವರಿಗೂ ದೊಡ್ಡ ಮಟ್ಟದ ಗೆಲುವನ್ನು ತಂದು ಕೊಟ್ಟಿತ್ತು.

ಮೇಘಾ ಶೆಟ್ಟಿ ಅವರು ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಟ್ರಿಬಲ್ ರೈಡಿಂಗ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ. ಧನ್ವೀರ್ ನಟನೆಯ ಕೈವಾ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಸದ್ಯ ಆಪರೇಷನ್ ಲಂಡನ್ ಕೆಫೆ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.
——

Be the first to comment

Leave a Reply

Your email address will not be published. Required fields are marked *

Translate »
error: Content is protected !!