Sanjana anand: ವಿಕ್ರಮ್ ರವಿಚಂದ್ರನ್ ಗೆ ಸಂಜನಾ ಆನಂದ್ ನಾಯಕಿ

ವಿಕ್ರಮ್ ರವಿಚಂದ್ರನ್ ನಟನೆಯ ಮುಧೋಳ ಸಿನಿಮಾದಲ್ಲಿ ನಾಯಕಿ ಆಗಿ ಸಂಜನಾ ಆನಂದ್ ನಟಿಸಲಿದ್ದಾರೆ ಎಂದು ಹೇಳಲಾಗಿದೆ.

ಕೆಮಿಸ್ಟ್ರಿ ಅಫ್ ಕರಿಯಪ್ಪ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ ನಟಿ ಸಂಜನಾ ಆನಂದ್ ಬಳಿಕ ದುನಿಯಾ ವಿಜಯ್ ನಟನೆಯ ಸಲಗ ಸೇರಿದಂತೆ ಅನೇಕ ಸಿನಿಮಾಗಳಿಗೆ ನಾಯಕಿಯಾಗಿ ನಟಿಸಿದ್ದಾರೆ. ತೆಲುಗು ಚಿತ್ರದಲ್ಲೂ ನಟಿಸಿರುವ ಸಂಜನಾ ಇದೀಗ ಮುಧೋಳ್ ಚಿತ್ರಕ್ಕೂ ಆಯ್ಕೆಯಾಗಿದ್ದಾರೆ ಎನ್ನಲಾಗಿದ್ದು ಸಧ್ಯವೇ ಈ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಲಿದೆ.

ಅಧಿಕೃತವಾಗಿ ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಚಿತ್ರಕ್ಕೆ ಸಂಜನಾ ಫೈನಲ್ ಆಗಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ಸಿನಿಮಾದ ಶೂಟಿಂಗ್ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಸಾಹಸಮಯ ಸನ್ನಿವೇಶಗಳನ್ನು ನಿರ್ದೇಶಕರು ಸೆರೆ ಹಿಡಿಯುತ್ತಿದ್ದಾರೆ. ಇದೊಂದು ಆಕ್ಷನ್ ಸಿನಿಮಾವಾಗಿದ್ದು, ಕಳೆದ ಒಂದು ವಾರದಿಂದ ಚಿತ್ರೀಕರಣ ನಡೆಯುತ್ತಿದೆ.

ಮಗನ ಚಿತ್ರಕ್ಕೆ ಮುಧೋಳ ಎಂಬ ಟೈಟಲ್ ನ್ನು ರವಿಚಂದ್ರನ್ ನೀಡಿರುವುದು ವಿಶೇಷ ಆಗಿದೆ.
—–

Be the first to comment

Leave a Reply

Your email address will not be published. Required fields are marked *

Translate »
error: Content is protected !!