Canne Film Festival : ಮೊದಲ ಬಾರಿ ಕಾನ್​ ಚಿತ್ರೋತ್ಸವದಲ್ಲಿ ಭಾಗಿಯಾದ ಅಟ್ಲಿ ಕುಮಾರ್​-ಪ್ರಿಯಾ ದಂಪತಿ​

#JawanMovie #AtleeKumar

ಕಾನ್​ ಚಿತ್ರೋತ್ಸವದಲ್ಲಿ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುವುದೇ ಒಂದು ವಿಶೇಷ ಆಕರ್ಷಣೆ. ಅಟ್ಲಿ ಕುಮಾರ್​ ಮತ್ತು ಪ್ರಿಯಾ ಕೂಡ ಕೆಂಪು ಹಾಸಿನಲ್ಲಿ ನಡೆದು ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್​ ನೀಡಿದ್ದಾರೆ.

ಭಾರತೀಯ ಚಿತ್ರರಂಗದಲ್ಲಿ ಅಟ್ಲಿ ಕುಮಾರ್​ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಕಾಲಿವುಡ್​ನಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ‘ಜವಾನ್​’ ಸಿನಿಮಾ ಮೂಲಕ ಅವರು ಬಾಲಿವುಡ್​ಗೂ ಕಾಲಿಟ್ಟಿದ್ದಾರೆ. ಈ ನಡುವೆ ಅವರು ಕಾನ್​​ ಚಿತ್ರೋತ್ಸವಕ್ಕೆ ಹಾಜರಿ ಹಾಕಿದ್ದಾರೆ.

ನಿರ್ದೇಶಕ ಅಟ್ಲಿ ಕುಮಾರ್​ ಅವರು ತಮ್ಮ ಪತ್ನಿ ಪ್ರಿಯಾ ಜೊತೆ ಕಾನ್​​​ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಇದೇ ಮೊದಲ ಬಾರಿ ಅವರಿಗೆ ಈ ಪ್ರತಿಷ್ಠಿತ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಕಾನ್​ ಚಿತ್ರೋತ್ಸವದಲ್ಲಿ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕುವುದೇ ಒಂದು ವಿಶೇಷ ಆಕರ್ಷಣೆ. ಅಟ್ಲಿ ಕುಮಾರ್​ ಮತ್ತು ಪ್ರಿಯಾ ಕೂಡ ಕೆಂಪು ಹಾಸಿನಲ್ಲಿ ನಡೆದು ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್​ ನೀಡಿದ್ದಾರೆ. ಅವರ ಫೋಟೋಗಳು ವೈರಲ್​ ಆಗಿವೆ.

ತಮಿಳಿನಲ್ಲಿ ಅಟ್ಲಿ ಕುಮಾರ್​ ‘ರಾಜಾ ರಾಣಿ’, ‘ಮೆರ್ಸೆಲ್​’, ‘ಬಿಗಿಲ್​’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದಾರೆ. ಅನೇಕ ಪ್ರಶಸ್ತಿಗಳು ಅವರಿಗೆ ಸಿಕ್ಕಿವೆ. ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿರುವುದರಿಂದ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!