The diary of west bengal: ಬರುತ್ತಿದೆ ಮತ್ತೊಂದು ವಿವಾದಾತ್ಮಕ ಸಿನಿಮಾ!

ದಿ ಕೇರಳ ಸ್ಟೋರಿ ಚಿತ್ರದ ನಂತರ ಪಶ್ಚಿಮ ಬಂಗಾಳಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಚಿತ್ರವೊಂದು ತೆರೆಗೆ ಬರುತ್ತಿದೆ.

ದ ಡೈರಿ ಆಫ್ ವೆಸ್ಟ್ ಬೆಂಗಾಲ್ ಹೆಸರಿನ ಚಿತ್ರ ಪಶ್ಚಿಮ ಬಂಗಾಳದಲ್ಲಿ ಹೊಸ ವಿವಾದವನ್ನು ಎಬ್ಬಿಸಿದೆ. ರಾಜಕೀಯ ವಿಡಂಬನಾತ್ಮಕ ಚಿತ್ರ ಆಗಿದೆ ಎನ್ನುವ ಕಾರಣಕ್ಕೆ ಚಿತ್ರದ ನಿರ್ದೇಶಕ ಸನೋಜ್ ಮಿಶ್ರ ಅವರ ವಿರುದ್ಧ ಪಶ್ಚಿಮ ಬಂಗಾಳ ಸರಕಾರ ಹಾಗೂ ಪೊಲೀಸರು ಕೆಂಗಣ್ಣು ಬೀರಿದ್ದಾರೆ. ರಾಜ್ಯ ಸರ್ಕಾರಕ್ಕೆ ಮಾನಹಾನಿ ಮಾಡಲಾಗಿದೆ ಎಂದು ಆರೋಪಿಸಿ ಬಂಗಾಳದ ಪೊಲೀಸರು ನಿರ್ದೇಶಕರ ವಿರುದ್ಧ ನೋಟಿಸ್ ಜಾರಿ ಮಾಡಿದ್ದಾರೆ.

ಚಿತ್ರದ ನಿರ್ದೇಶಕ ಸನೋಜ್ ಮಿಶ್ರ ಅವರಿಗೆ ನೋಟಿಸ್ ನೀಡಲಾಗಿದೆ. ಚಿತ್ರತಂಡ ಈ ಬಗ್ಗೆ ನೋಟಿಸಿಗೆ ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡುವಂತೆ ಪಶ್ಚಿಮ ಬಂಗಾಳದ ಪೊಲೀಸರಿಗೆ ವಿನಂತಿಸಿದೆ.

ಇದರ ಜೊತೆಗೆ ಚಿತ್ರದ ನಿರ್ದೇಶಕರು ಫೇಸ್ ಬುಕ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಸಹಾಯವನ್ನು ಕೋರಿದ್ದಾರೆ. ನನ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ನನ್ನನ್ನು ಬಂಧಿಸಿ ಜೈಲಿನಲ್ಲಿ ಕೊಲ್ಲಬಹುದು. ನಾನು ಸಿನಿಮಾ ಮಾಡಿದ್ದೇನೆ ಹೊರತು ಯಾವುದೇ ಅಪರಾಧ ಮಾಡಿಲ್ಲ. ಸತ್ಯ ಹೇಳಿದಕ್ಕೆ ನನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಚಿತ್ರವನ್ನು ನಾರಾಯಣ ಸಿಂಗ್ ನಿರ್ಮಿಸುತ್ತಿದ್ದಾರೆ. ಚಿತ್ರವು ಪಶ್ಚಿಮ ಬಂಗಾಳದ ಹಲವು ಸತ್ಯ ಘಟನೆಗಳನ್ನು ಆಧರಿಸಿದೆ ಎಂದು ಹೇಳಲಾಗಿದೆ.

ಚಿತ್ರದ ಟ್ರೈಲರ್ ನಲ್ಲಿ ಪಶ್ಚಿಮ ಬಂಗಾಳದ ಕೋಮು ಘರ್ಷಣೆಗಳು, ರೋಹಿಂಗ್ಯ ವಸಾಹತುಗಳು, ವಲಸೆಯ ಬಗ್ಗೆ ದೃಶ್ಯಗಳಿವೆ. ಚಿತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹೋಲುವ ಮಹಿಳಾ ನಾಯಕಿಯ ಪಾತ್ರ ಇದೆ.
_

Be the first to comment

Leave a Reply

Your email address will not be published. Required fields are marked *

Translate »
error: Content is protected !!