ನಟಿ ಹರಿಪ್ರಿಯಾ ಅಭಿನಯದ 25ನೇ ಚಿತ್ರ ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರ ಸದ್ದಿಲ್ಲದೆ ತನ್ನ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರುವ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸದ್ಯ ನಿಧಾನವಾಗಿ ತನ್ನ ಪ್ರಮೋಷನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ತನ್ನ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ನಟ ವಿನಯ್ ರಾಜಕುಮಾರ್ ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರದ ಫಸ್ಟ್ ಟೀಸರ್ ಅನ್ನು ಬಿಡುಗಡೆಗೊಳಿಸಿದರು. ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರದಲ್ಲಿ ಮೊದಲ ಬಾರಿಗೆ ನಟಿ ಹರಿಪ್ರಿಯಾ ತನಿಖಾಧಿಕಾರಿ ವೈದೇಹಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪಾರ್ವತಮ್ಮ ಪಾತ್ರಕ್ಕೆೆ ನಟಿ ಸುಮಲತಾ ಅಂಬರೀಶ್ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಚಿತ್ರದಲ್ಲಿ ಯುವನಟರಾದ ಪ್ರಭು, ಸೂರಜ್ ಗೌಡ, ತರಂಗ ವಿಶ್ವ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರದ ಹಾಡುಗಳಿಗೆ ಮಿಧುನ್ ಮುಕುಂದನ್ ಸಂಗೀತ ಸಂಯೋಜಿಸಿದ್ದಾರೆ. ಟೀಸರ್ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದ ನಟಿ ಹರಿಪ್ರಿಯಾ, ಸುಮಲತಾ ಅಂಬರೀಶ್, ಪ್ರಭು, ಸೂರಜ್ ಗೌಡ, ತರಂಗ ವಿಶ್ವ, ನಿರ್ದೇಶಕ ಪವನ್ ಒಡೆಯರ್ ಮೊದಲಾದವರು ಚಿತ್ರದ ಬಗ್ಗೆೆ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಂಡರು. ಸದ್ಯಕ್ಕೆೆ ಟೀಸರ್ ಮೂಲಕ ಹೊರಬಂದಿರುವ ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರ ಮುಂಬರುವ ನವೆಂಬರ್ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.
Pingback: sa gaming