ಸುಮಂತ್ ಶೈಲೇಂದ್ರ ನಟನೆಯ ಚೇಸರ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.
ಸುಮಂತ್ ಶೈಲೇಂದ್ರ ಅವರ ಹುಟ್ಟು ಹಬ್ಬದಂದು ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಸಸ್ಪೆನ್ಸ್ ಹಾಗೂ ಆಕ್ಷನ್ ಜಾನರ್ ಹೊಂದಿರುವ ಈ ಚಿತ್ರಕ್ಕೆ ಎಂ ಜೈ ರಾಮ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಚಿತ್ರಕಥೆಯನ್ನು ಕೂಡ ಅವರೇ ಬರೆದಿದ್ದಾರೆ.
ಚೇಸರ್ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಹಾಡುಗಳ ಶೂಟಿಂಗ್ ಮಾತ್ರ ಬಾಕಿ ಇದೆ. ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ ಈ ಚಿತ್ರದ ಟ್ರೈಲರ್ ಶೀಘ್ರ ಬಿಡುಗಡೆ ಆಗಲಿದೆ.
ಸುಮಂತ್ ಶೈಲೇಂದ್ರ ಅವರು ಗೋವಿಂದ ಗೋವಿಂದ ಸಿನಿಮಾದ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ತಿರುಪತಿ ಎಕ್ಸ್ಪ್ರೆಸ್ ಮೂಲಕ ಸುಮಂತ್ ಅವರು ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಐಡೆಂಟಿಟಿ ಹೊಂದಿದ್ದಾರೆ.
ಚಿತ್ರದಲ್ಲಿ ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷಾ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಕಡ್ಡಿಪುಡಿ ಚಂದ್ರು, ಸಂಗೀತ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕೆಎಸ್ ಚಂದ್ರಶೇಖರ್ ಅವರ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಅವರ ಸಂಕಲನ ಇದೆ.
_____

Be the first to comment