Timmana mottegalu: ಈ ತಿಂಗಳು ‘ತಿಮ್ಮನ ಮೊಟ್ಟೆಗಳು’ ಸಿನಿಮಾ ಬಿಡುಗಡೆ

ಹಿರಿಯ ನಟ ಸುಚೇಂದ್ರ ಪ್ರಸಾದ್ ಅಭಿನಯದ ‘ತಿಮ್ಮನ ಮೊಟ್ಟೆಗಳು’ ಸಿನಿಮಾ ಈ ತಿಂಗಳು ಬಿಡುಗಡೆ ಆಗಲಿದೆ.

ಇದು ರಕ್ಷಿತ್ ತೀರ್ಥಹಳ್ಳಿ ಅವರ ಚೊಚ್ಚಲ ನಿರ್ದೇಶನದ ಚಿತ್ರ ಆಗಿದೆ. ಕೇಶವ ಗುತ್ತಳ್ಳಿಕೆ, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ರಾಘು ರಾಮನಕೊಪ್ಪ ಮುಖ್ಯ ಪಾತ್ರದಲ್ಲಿ ಇದ್ದಾರೆ. ಚಿತ್ರದ ಶೂಟಿಂಗ್ ಈಗಾಗಲೇ ಮುಕ್ತಾಯಗೊಂಡಿದ್ದು, ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದೆ.

ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ ಬರೆದ ಕಾಡಿನ ನೆಂಟರು ಎನ್ನುವ ಕಥಾ ಸಂಕಲನಿಂದ ಆಯ್ದ ಕಥೆಯಿಂದ ಈ ಸಿನಿಮಾ ತಯಾರಾಗುತ್ತಿದೆ. ಮನುಷ್ಯನ ನಂಬಿಕೆ ಹಾಗೂ ಆಚರಣೆಯ ಮೇಲೆ ಕಥಾವಸ್ತು ಕೇಂದ್ರೀಕೃತವಾಗಿದೆ.

ಚಿತ್ರವನ್ನು ಚಿಕ್ಕಮಗಳೂರು ಹಾಗೂ ಶಿವಮೊಗ್ಗದ ಸುತ್ತಲ ಪ್ರದೇಶಗಳಲ್ಲಿ ಚಿತ್ರಿಕರಿಸಲಾಗಿದೆ. ಪ್ರವೀಣ್ ಎಸ್ ಛಾಯಾಗ್ರಹಣ, ಬಿಎಸ್ ಕೆಂಪರಾಜ್ ಸಂಕಲನ, ಹೇಮಂತ್ ಚಾಯ್ಸ್ ಸಂಗೀತ ಈ ಚಿತ್ರಕ್ಕಿದೆ. ರಕ್ಷಿತ್ ತೀರ್ಥಹಳ್ಳಿ ಸಾಹಿತ್ಯ ಬರೆದಿರುವ ಮೂರು ಹಾಡುಗಳಿಗೆ ವಾಸುಕಿ ವೈಭವ್, ಐಶ್ವರ್ಯ ರಂಗರಾಜನ್, ಆದರ್ಶ್ ಅಯ್ಯಂಗಾರ್, ಚಿನ್ಮಯ್ ಚಂದ್ರಶೇಖರ್ ಧ್ವನಿ ನೀಡಿದ್ದಾರೆ.

ಈಗಾಗಲೇ ಚಿತ್ರದ ಮೇಕಿಂಗ್ ಟೀಸರ್ ಬಿಡುಗಡೆ ಮಾಡಲಾಗಿದೆ. ಚಿತ್ರತಂಡ ಮಾರ್ಕೆಟಿಂಗ್ ಕೆಲಸದಲ್ಲಿ ತೊಡಗಿದ್ದು ಈ ತಿಂಗಳಲ್ಲಿ ಚಿತ್ರ ತೆರೆಗೆ ತರಲು ಸಿದ್ಧತೆ ನಡೆಸಿದೆ.
_

Be the first to comment

Leave a Reply

Your email address will not be published. Required fields are marked *

Translate »
error: Content is protected !!