ಸೆಪ್ಟಂಬರ್ ಗೆ ಬರಲಿದೆ ನೈಜ ಘಟನೆಯ ಚಿತ್ರ ಟೇಕ್ವಾಂಡೋ ಗರ್ಲ್

ನೈಜ ಘಟನೆ ಆಧಾರಿತ ಚಿತ್ರ ಟೇಕ್ವಾoಡೋ ಗರ್ಲ್ ಸೆಪ್ಟೆಂಬರ್ ತಿಂಗಳಿನಲ್ಲಿ ತೆರೆಗೆ ಬರಲಿದೆ.

ಈ ಚಿತ್ರದ ಹೈಲೆಟ್ ಹತ್ತು ವರ್ಷದ ಪೋರಿ. ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು, ಚಿತ್ರ ರಿಲೀಸ್ ಗೆ ಸಿದ್ಧತೆ ಮಾಡಲಾಗಿದೆ. ಟೇಕ್ವಾoಡೋ ಸಮರ ಕಲೆಯ ಸುತ್ತ ನಡೆವ ಕಥೆ ಚಿತ್ರ ಹೊಂದಿದ್ದು, ನಾಲ್ಕು ಬಾರಿ ಅಂತಾರಾಷ್ಟ್ರೀಯ ಚಾಂಪಿಯನ್ ಶಿಪ್ ಗಳಲ್ಲಿ ಭಾಗವಹಿಸಿ ಬ್ಲಾಕ್ ಬೆಲ್ಟ್ ಪಡೆದ ಹುಡುಗಿ ಚಿತ್ರದ ಆಕರ್ಷಣೆ ಆಗಿದ್ದಾಳೆ.

ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಮೇಲೆ ಕೆಟ್ಟ ಕೃತ್ಯಗಳು ನಡೆಯುತ್ತಲೇ ಇವೆ. ಹೆಣ್ಣು ತನ್ನನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ “ಟೇಕ್ವಾಂಡೋ ಗರ್ಲ್” ತಯಾರಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಋತು ವರ್ಷ ಚಿತ್ರದ ಪ್ರಮುಖ ಆಕರ್ಷಣೆ ಆಗಿದ್ದಾಳೆ. ಬಡ ಕುಟುಂಬದ ಹೆಣ್ಣು ಮಗಳು ಶಿಕ್ಷಣಕ್ಕಾಗಿ ಎಷ್ಟು ಕಷ್ಟ ಪಡುತ್ತಾಳೆ. ಓದುವುದೇ ಕಷ್ಟ ಇರುವ ಸಮಯದ ನಡುವೆ ಟೇಕ್ವಾಂಡೋ ಸಮರ ಕಲೆ ಹೇಗೆ ಕಲಿಯುತ್ತಾಳೆ? ಈ ವಿದ್ಯೆ ಮೂಲಕ ಸಮಾಜಕ್ಕೆ ಹೇಗೆ ಮಾದರಿ ಆಗುತ್ತಾಳೆ ಎನ್ನುವುದೇ ಚಿತ್ರದ ಕಥೆ ಆಗಿದೆ.

ಐದನೇ ತರಗತಿಯಲ್ಲಿ ಓದುತ್ತಿರುವ ಋತು ವರ್ಷ 3ನೇ ವಯಸ್ಸಿನಿಂದ ಈ ಕಲೆಯನ್ನು ಕರಗತ ಮಾಡಿಕೊಂಡಿದ್ದಾಳೆ. ಒಟ್ಟು ಎಂಟು ಪರೀಕ್ಷೆಗಳನ್ನು ಎದುರಿಸಿ ಬ್ಲಾಕ್ ಬೆಲ್ಟ್ ಪಡೆದು 4 ಅಂತರಾಷ್ಟ್ರೀಯ ಚ್ಯಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಟೇಕ್ವಾಂಡೋ ಪಟು ಎನಿಸಿದ್ದಾಳೆ.

ಈಕೆಯ ಸಾಧನೆಗೆ ಮೂಲ ಪ್ರೇರಣೆ ತಾಯಿ ಡಾ. ಸುಮೀತಾ ಪ್ರವೀಣ್. ಮಗಳಿಗೆ ಸ್ವಯಂ ರಕ್ಷಣೆ ಮುಖ್ಯ ಎನ್ನುವುದನ್ನು ತಿಳಿ ಹೇಳಿ ಆಕೆಯನ್ನು 3ನೇ ವಯಸ್ಸಿನಿಂದ ತಯಾರಿ ಮಾಡಿದ್ದಾರೆ.ಇದು ಮಗಳಿಗಷ್ಟೇ ಸೀಮಿತವಾಗಬಾರದು ಎಂದು ಅದನ್ನೇ ಒಂದು ಸಿನಿಮಾ ಮುಖಾಂತರ ಸಮಾಜಕ್ಕೆ ಹೇಳಲು ಟೇಕ್ವಾಂಡೋ ಗರ್ಲ್ ಸಿನಿಮಾ ನಿರ್ಮಾಪಕರೂ ಆಗಿದ್ದಾರೆ.

ಈ ಚಿತ್ರಕ್ಕೆ ಪತಿ ಪ್ರವೀಣ್ ಭಾನು ಕೂಡ ಸಾಥ್ ನೀಡಿ ಮಗಳನ್ನು ಬೆಳ್ಳಿತೆರೆಗೆ ಪರಿಚಯಿಸಿದ್ದಾರೆ. ಮಗಳ ಹುಟ್ಟು ಹಬ್ಬದಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ.

ನನ್ನ ಮಗಳಷ್ಟೇ ಅಲ್ಲ. ಎಲ್ಲಾ ಹೆಣ್ಣು ಮಕ್ಕಳು ಟೇಕ್ವಾಂಡೋ ಕಲೆ ಕಲಿಯಬೇಕು ಎಂದು ಸುಮೀತಾ ಹೇಳಿದ್ದಾರೆ.

ಈ ಚಿತ್ರಕ್ಕೆ ರವೀಂದ್ರ ವಂಶಿ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈ ಹಿಂದೆ ಪುಟಾಣಿ ಸಫಾರಿ ಚಿತ್ರ ನಿರ್ದೇಶನ ಮಾಡಿದ್ದ ಇವರು, ಟೇಕ್ವಾಂಡೋ ಗರ್ಲ್ ಚಿತ್ರ ನಿರ್ದೇಶನಕ್ಕೆ 25 ದಿನ ತರಬೇತಿ ಪಡೆದಿದ್ದಾರೆ. ಟೇಕ್ವಾಂಡೋ ಬಗ್ಗೆ ತಿಳಿದುಕೊಂಡು ನಂತರ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇದು ಮಕ್ಕಳ ಚಿತ್ರ ನಿಜ. ಆದರೆ ಮಕ್ಕಳಿಂದ ದೊಡ್ಡವರಿಗಾಗಿ ನಿರ್ಮಿಸಿರುವ ಚಿತ್ರ ಇದಾಗಿದ್ದು ಈ ಚಿತ್ರವನ್ನು ಶಾಲಾ ಮಕ್ಕಳಿಗೆ ತೋರಿಸಲು ನಿರ್ದರಿಸಿದ್ದೇವೆ ಎಂದು ನಿರ್ದೇಶಕರು ಹೇಳಿದ್ದಾರೆ.

ಚಿತ್ರದಲ್ಲಿ ಸುಮಾರು ಇನ್ನೂರು ಟೇಕ್ವಾಂಡೋ ವಿದ್ಯಾರ್ಥಿಗಳು ಅಭಿನಯಿಸಿದ್ದಾರೆ. ಸುಮಾರು ನೂರೈವತ್ತು ಚಿತ್ರಗಳಿಗೆ ರಾಗ ಸಂಯೋಜನೆ ಮಾಡಿರುವ ಸಂಗೀತ ನಿರ್ದೇಶಕ ಎಂ ಎಸ್. ತ್ಯಾಗರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಚೆಕ್ ದೇ ಇಂಡಿಯಾ, ದಂಗಲ್ ರೀತಿಯ ಚಿತ್ರ ಇದಾಗಿದ್ದು ಎಲ್ಲರೂ ಈ ಚಿತ್ರವನ್ನು ನೋಡಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದ್ದಾರೆ.

ನಟ ಗಣೇಶ್ ರಾವ್ ಚಿತ್ರದ  ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.


__

Be the first to comment

Leave a Reply

Your email address will not be published. Required fields are marked *

Translate »
error: Content is protected !!