‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಒಟಿಟಿಗೆ

ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಒಟಿಟಿಯಲ್ಲಿ ಸೆಪ್ಟೆಂಬರ್ 15 ರಂದು Zee5 ನಲ್ಲಿ ಬಿಡುಗಡೆಯಾಗಲಿದೆ.

ರಕ್ಷಿತ್ ಶೆಟ್ಟಿ ಅವರ ಪರವಃ ಸ್ಟುಡಿಯೋಸ್ ಪ್ರಸ್ತುತಪಡಿಸಿದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದಲ್ಲಿ ಪ್ರಜ್ವಲ್ ಬಿಪಿ, ಮಂಜುನಾಥ್ ನಾಯಕ, ರಾಕೇಶ್ ರಾಜಕುಮಾರ್, ಶ್ರೀವತ್ಸ ಮತ್ತು ತೇಜಸ್ ಜಯಣ್ಣ ಅರಸ್ ಸೇರಿದಂತೆ ಬಹುತೇಕ ಹೊಸ ಕಲಾವಿದರನ್ನು ನಟಿಸಿದ್ದಾರೆ.

ಚಿತ್ರದಲ್ಲಿ ರಿಷಬ್ ಶೆಟ್ಟಿ, ನಿರ್ದೇಶಕ ಪವನ್ ಕುಮಾರ್ ಮತ್ತು ಶೈನ್ ಶೆಟ್ಟಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಜುಲೈ 21ರಂದು ಬಿಡುಗಡೆಯಾಗಿ ಹಿಟ್ ಎನಿಸಿತು.

ನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕಮರ್ಷಿಯಲ್ ಆಗಿ ಯಶಸ್ಸು ಕಂಡಿತು.

ನಿರ್ದೇಶಕ ನಿತಿನ್ ಕಷ್ಣಮೂರ್ತಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರು ವರುಣ್ ಗೌಡ, ಪ್ರಜ್ವಲ್ ಮತ್ತು ಛಾಯಾಗ್ರಾಹಕ ಅರವಿಂದ್ ಎಸ್. ಕಶ್ಯಪ್ ಅವರೊಂದಿಗೆ ಗುಲ್ಮೊಹರ್ ಫಿಲ್ಮ್ಸ್ ಮತ್ತು ವರನ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!