‘ಆಡೇ ನಮ್ God’ ಅಕ್ಟೋಬರ್ 6ಕ್ಕೆ ಬೆಳ್ಳಿತೆರೆಗೆ

‘ಆಡೇ ನಮ್ God’ ಚಿತ್ರ ಅಕ್ಟೋಬರ್ 6ಕ್ಕೆ ಬೆಳ್ಳಿತೆರೆಗೆ ಬರಲಿದೆ.

ಆಡನ್ನು ದೇವರಾಗಿ ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎನ್ನುವ ಕಥೆ ಚಿತ್ರದಲ್ಲಿದೆ. ಈಗಾಗಲೇ ಟ್ರೇಲರ್ ಅನಾವರಣಗೊಂಡಿದ್ದು, ಒಂದೊಳ್ಳೆ ಸಂದೇಶದೊಂದಿಗೆ ಹಾಸ್ಯಮಯವಾಗಿ ಹಿರಿಯ ನಿರ್ದೇಶಕ ಪಿ.ಎಚ್.ವಿಶ್ವನಾಥ್ ಕಥೆ ಹೆಣೆದಿದ್ದಾರೆ.

ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರತಂಡ ಸಿನಿಮಾದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಪಿ.ಎಚ್.ವಿಶ್ವನಾಥ್ ಅವರು, ಸಿನಿಮಾ ಮಾಡಿದ ಮೇಲೆ ಸಿನಿಮಾದ ಮೇಲೆ ನಿರ್ದೇಶಕರು ಮಾತನಾಡುವುದು ಏನೂ ಇರುವುದಿಲ್ಲ. ಸಿನಿಮಾ ಏನಾದರೂ ಹೇಳಬೇಕು. ಇವತ್ತಿನ ಟ್ರೆಂಡ್ ಗೆ ಸರಿಯಾಗುವಂತಹ ಸಿನಿಮಾ ಇದು. ಇವತ್ತಿನ ಆಡಿಯನ್ಸ್ ಗೆ ಕಥೆ ಇಷ್ಟವಾಗುತ್ತದೆ. ಗಂಭೀರವಾದ ವಿಷಯವನ್ನು ಲಘು ಹಾಸ್ಯದೊಂದಿಗೆ ಹೇಳಿದ್ದೇವೆ. ಹೊಸ ಹುಡುಗರು ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಇವರು ಏನು ಮಾಡಿದ್ದಾರೆ ಎಂಬ ಕುತೂಹಲಕ್ಕಾಗಿ ಜನ ಬಂದು ನೋಡಬೇಕು ಎಂದು ತಿಳಿಸಿದರು.

ನಟರಾಜ್ ಮಾತನಾಡಿ, ನನ್ನದು ಒಬ್ಬ ಮಧ್ಯವರ್ತಿಯ ಪಾತ್ರ. ಅವನು ಮಾಡದ ಕೆಲಸವಿಲ್ಲ. .ನಿಯತ್ತನ್ನು ನಂಬಿಕೊಂಡಿರುವ ಪಾತ್ರ ಇದು. ಒಂದೊಳ್ಳೆ ಪಾತ್ರ ಕೊಟ್ಟಿದ್ದಕ್ಕೆ ನಿರ್ದೇಶಕರಿ ಗೆ ಧನ್ಯವಾದಗಳು. ಸಂಭಾಷಣೆ ಬರೆಯಲು ಸಹ ಅವಕಾಶ ಸಿಕ್ಕಿದೆ. ತುಂಬಾ ಖುಷಿ ಕೊಟ್ಟ ಜರ್ನಿ ಎಂದರು.

ನಿರ್ಮಾಪಕ ಪ್ರೊ ಬಿ ಬಸವರಾಜ್ ಮಾತನಾಡಿ, ನಾನು ರಿಟೈಡ್ ಪ್ರೊಫೆಸರ್. ನಿರ್ದೇಶಕ ಪಿ.ಎಚ್.ವಿಶ್ವನಾಥ್ ಅವರ ಪರಿಚಯವಾದಾಗ ಹೊಸ ಆಸೆ ಹುಟ್ಟಿತ್ತು. ಸಿನಿಮಾ ಮಾಡಬೇಕು ಎಂದು ಅನಿಸಿತು. ಅಕ್ಟೋಬರ್ 6ಕ್ಕೆ ಸಿನಿಮಾ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಬಹಳ ಸಂತೋಷವಾಗುತ್ತಿದೆ. ಸಮಾಜಕ್ಕೆ ಒಂದೊಳ್ಳೆ ಮೆಸೇಜ್ ಕೊಟ್ಟರೆ ನನ್ನ ವೃತ್ತಿ ಜೀವನಕ್ಕೂ ಒಂದು ರೀತಿ ಸಾರ್ಥಕಥೆ ಮಾಡಿದಂತಾಗುತ್ತದೆ ಎನ್ನುವ ಉದ್ದೇಶದಿಂದ ಚಿತ್ರ ಮಾಡಿದ್ದೇನೆ. ಇಡೀ ತಂಡ ಸೇರಿ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ. ಜನ ಬೆಂಬಲಿಸಬೇಕು ಎಂದರು.

ರಾಮ ರಾಮ ರೇ ಸಿನಿಮಾ ಖ್ಯಾತಿಯ ನಟರಾಜ್, ಮಂಜುನಾಥ್ ಜಂಬೆ, ಅಜಿತ್ ಬೊಪ್ಪನಹಳ್ಳಿ, ಅನೂಪ್ ಶೂನ್ಯ, ಸಾರಿಕ ರಾವ್, ಬಿ ಸುರೇಶ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು ಸಂಕಲನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಅಕ್ಷಯ್ ವಿಶ್ವನಾಥ್ ಚಿತ್ರಕಥೆ, ಸಹ ನಿರ್ದೇಶನ ಇದೆ.

ಆರ್.ಕೆ. ಸ್ವಾಮಿನಾಥನ್ ಸಂಗೀತ, ಶಶಿಕುಮಾರ್ ಎಸ್ ಹಿನ್ನೆಲೆ ಸಂಗೀತ, ಹೃದಯ ಶಿವ-ನಿತಿನ್ ನಾರಾಯಣ್ ಸಾಹಿತ್ಯ , ರವೀಂದ್ರ ಸೊರಗಾವಿ-ಚೇತನ್ ನಾಯಕ್ ಗಾಯನ ಇದೆ.

ಬಿ.ಬಿ.ಆರ್ ಫಿಲಂಸ್ ಹಾಗೂ ಎವೆರೆಸ್ಟ್ ಇಂಡಿಯಾ ಎಂಟರ್ ಟೈನರ್ಸ್ ಬ್ಯಾನರ್ ನಡಿ ಪ್ರೊ.ಬಿ. ಬಸವರಾಜ್ ಹಾಗೂ ರೇಣುಕಾ ಬಸವರಾಜ್ ನಿರ್ಮಾಣ ಮಾಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!