Shivamma: ‘ಶಿವಮ್ಮ’ ಟೀಸರ್ ರಿಲೀಸ್

ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಶಿವಮ್ಮ ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದೆ. ಊರಿನ ಗ್ರಾಮಸ್ಥರೇ ಮುಖ್ಯ ತಾರಾಗಣದಲ್ಲಿದ್ದಾರೆ.

‘ಶಿವಮ್ಮ’ ಕುಟುಂಬದ ಉನ್ನತಿಗೋಸ್ಕರ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರದಲ್ಲಿ ತೊಡಗುವ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ಹಳ್ಳಿ ಹೆಣ್ಣುಮಗಳ ಕಥೆಯಾಗಿದೆ.

ಇರಾನ್‌ನಲ್ಲಿ ನಡೆದ ಫಜರ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಮೊದಲ ಕನ್ನಡ ಚಿತ್ರ ಇದಾಗಿದ್ದು, ಚಿತ್ರವು ಈಗಾಗಲೇ ಐದು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.

ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, ‘ಶಿವಮ್ಮ’ ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಲಿದೆ.

ಭಾರತದ ಪ್ರತಿಷ್ಠಿತ ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನವನ್ನು ಕಾಣುತ್ತಿದೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!