ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ನಿರ್ಮಾಣದ ಚಿತ್ರಕ್ಕೆ ಪ್ರಿಯಾಂಕಾ ಉಪೇಂದ್ರ ನಾಯಕಿ ಆಗಿ ಆಯ್ಕೆ ಆಗಿದ್ದಾರೆ.
ನಟಿ ರಾಧಿಕಾ ಕುಮಾರಸ್ವಾಮಿ ಅವರು ನಟನೆ ಜೊತೆಗೆ ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ. ಶಮಿಕಾ ಎಂಟರ್ ಪ್ರೈಸಸ್ ಮೂಲಕ ರಾಧಿಕಾ ಅವರು ಮೂರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈಗ ಅವರ ಸಹೋದರ ರವಿರಾಜ್ ಚಂದನವನಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ರವಿರಾಜ್ ಅವರಿಗೆ ಸಿನಿಮಾರಂಗ ಹೊಸದೇನಲ್ಲ. ತನ್ನ ಸಹೋದರಿ ರಾಧಿಕಾ ಅವರ ಶಮಿಕಾ ಎಂಟರ್ ಪ್ರೈಸಸ್ ನಲ್ಲಿ ಸಹ ನಿರ್ಮಾಪಕನಾಗಿ ಕೆಲಸ ಮಾಡಿದ್ದಾರೆ. ‘ಲಕ್ಕಿ’, ‘ಸ್ವೀಟಿ ನನ್ನ ಜೋಡಿ’, ಭೈರಾದೇವಿ ಸಿನಿಮಾಗಳಲ್ಲಿ ರವಿರಾಜ್ ಅವರು ರಾಧಿಕಾ ಜೊತೆ ಕೆಲಸ ಮಾಡಿದ್ದರು. ಸಿನಿಮಾ ವಿತರಣೆ ವಿಭಾಗದಲ್ಲೂ ಕೆಲಸ ಮಾಡಿದ್ದಾರೆ. ಈಗ ಸ್ವತಂತ್ರ ನಿರ್ಮಾಪಕರಾಗಿ ಅವರು ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ.
ರವಿರಾಜ್ ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದು ಈಗಾಗಲೇ ಮೊದಲ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಗೆ ‘ಶ್ರೀ ದುರ್ಗಾಪರಮೇಶ್ವರಿ ಪ್ರೊಡಕ್ಷನ್’ ಎಂದು ಹೆಸರಿಟ್ಟಿದ್ದಾರೆ. ಬ್ಯಾನರ್ನ ಮೊದಲ ಸಿನಿಮಾವಾಗಿ ಹಾರರ್ ಚಿತ್ರ ರಿಲೀಸ್ಗೆ ರೆಡಿಯಾಗಿದೆ.
ರವಿರಾಜ್ ನಿರ್ಮಾಣದ ಸಿನಿಮಾವನ್ನು ಲೋಹಿತ್ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ. ಮತ್ತೊಂದು ಹಾರರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಲೋಹಿತ್ ಸಜ್ಜಾಗಿದ್ದಾರೆ.
_____


Be the first to comment