Emergency: 2024ಕ್ಕೆ ‘ಎಮರ್ಜೆನ್ಸಿ’ ಬಿಡುಗಡೆ

ಬಾಲಿವುಡ್‌ ನಟಿ ಕಂಗನಾ ರನೌತ್  ಚೊಚ್ಚಲ ನಿರ್ದೇಶನದ ‘ಎಮರ್ಜೆನ್ಸಿ’ ಬಿಡುಗಡೆ ದಿನಾಂಕವನ್ನು 2024ಕ್ಕೆ ಮುಂದೂಡಲಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಗನಾ, ‘ಈ ಹಿಂದೆ ನಾವು ‘ಎಮರ್ಜೆನ್ಸಿ’ ಚಿತ್ರವನ್ನು 2023 ನವೆಂಬರ್‌ನಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದೇವು. ಆದರೆ ನಾನು ಚಿತ್ರಗಳಲ್ಲಿ ಬ್ಯುಸಿಯಾಗಿರುವುದರಿಂದ ಈ ಚಿತ್ರವನ್ನು ಮುಂದಿನ ವರ್ಷಕ್ಕೆ  ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ಚಿತ್ರವನ್ನು ನವೆಂಬರ್ 24, 2023 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಮಣಿಕರ್ಣಿಕಾ ಫಿಲಂಸ್ ನಿರ್ಮಾಣದ ಕಂಗನಾ ರನೌತ್ ನಿರ್ದೇಶನದ ‘ಎಮರ್ಜೆನ್ಸಿ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಈಚೆಗೆ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿತ್ತು.

1975ರ ಜೂನ್ 25ರಂದು  ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. 1977ರ ಮಾರ್ಚ್‌ 21ರವರೆಗೂ ತುರ್ತು ಪರಿಸ್ಥಿತಿ ಮುಂದುವರಿದಿತ್ತು.

ಚಿತ್ರದಲ್ಲಿ ನಟಿ ಕಂಗನಾ ರನೌತ್ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾದ ಮೊದಲ ಟೀಸರ್ ಪ್ರೋಮೋವನ್ನು ಜೂನ್‌ನಲ್ಲಿ ಅನಾವರಣಗೊಳಿಸಲಾಗಿತ್ತು. “ಎಮರ್ಜೆನ್ಸಿ” ಸಿನಿಮಾವನ್ನು ಕಂಗನಾ 2021 ರಲ್ಲಿ ಘೋಷಿಸಿದ್ದರು.

ಈ ವರ್ಷದ ಜನವರಿಯಲ್ಲಿ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದರು. ಧಕಡ್ ಸಿನಿಮಾಗೆ ಕೆಲಸ ಮಾಡಿದ್ದ ರಿತೇಶ್ ಷಾ ಈ ಸಿನಿಮಾಗೆ ಸ್ಕ್ರಿಪ್ಟ್ ಬರೆದಿದ್ದಾರೆ. ಚಿತ್ರದಲ್ಲಿ ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ದಿವಂಗತ ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಾಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕಂಗನಾ ರನೌತ್ ತಮ್ಮ ಮುಂಬರುವ ಚಿತ್ರ ‘ತೇಜಸ್’ ಬಿಡುಗಡೆಗೆ ಕಾಯುತ್ತಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!