ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೆಲವೇ ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಈವರೆಗೂ ನಲವತ್ತು ದಿನಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ವಿಜಯ್ ಪ್ರಕಾಶ್ ಅವರು ಹಾಡಿರುವ “108 ಗೇ ಫೋನ್ ಮಾಡೋ ಶಿಷ್ಯ” ಎಂಬ ಹಾಡು ಇತ್ತೀಚೆಗೆ ಬಾರ್ ಸೆಟ್ ನಲ್ಲಿ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಧನಂಜಯ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ನಾಯಕ ಅರ್ಜುನ್, ಡ್ಯಾನ್ಸರ್ಸ್ ಜೊತೆ ಹೆಜ್ಜೆ ಹಾಕಿದ್ದಾರೆ.
ಶರತ್ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮಲ್ಲೇನಹಳ್ಳಿ ರಾಜು ನಿರ್ಮಾಣ ನಿರ್ವಹಣೆ ಮತ್ತು ಮುನಿರಾಜ್ (ಕಬ್ಜ) ಅವರ ಸಹ ನಿರ್ದೇಶನವಿದೆ.
ಕಥೆಗಾರರಾದ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಯಶ್ಚಿಕ ನಿಷ್ಕಲ. ಶೋಭ್ ರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್, ಡೈಮಂಡ್ ರಾಜಣ್ಣ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
Be the first to comment