ಬಿಗ್​ ಬಾಸ್ ಸ್ಪರ್ಧಿ ಅರೆಸ್ಟ್​​.. ಕಾರಣ?

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿ ವರ್ತೂರು​ ಸಂತೋಷ್​ ಅವರನ್ನು ಬಿಗ್​ ಬಾಸ್​ ಮನೆಯಿಂದ ಅರೆಸ್ಟ್ ಮಾಡಲಾಗಿದೆ.

ವರ್ತೂರು​ ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹುಲಿ ಉಗುರಿನ ಡಾಲರ್​ ಧರಿಸಿದ್ದ ಆರೋಪದ ಮೇಲೆ  ವರ್ತೂರು​ ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಭಾನುವಾರ ತಡರಾತ್ರಿ ಅರೆಸ್ಟ್​ ಮಾಡಿದ್ದಾರೆ.  ಸದ್ಯ ಅವರು ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ. ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ಹುಲಿಯ ಉಗುರಿನ ಡಾಲರ್ ಅನ್ನು ಕೊರಳಿಗೆ ಧರಿಸಿರುವ ಸಂತೋಷ್ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಅವರ ವಿರುದ್ಧ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿ ಡಾಲರ್ ಜಪ್ತಿ ಮಾಡಿದ್ದಾರೆ.

ಮೇಲ್ನೋಟಕ್ಕೆ ಡಾಲರ್​ನಲ್ಲಿ ಬಳಸಿರುವುದು ಹುಲಿ ಉಗುರು ಎಂಬುದು ಸಾಬೀತಾಗಿದೆ ಎಂದು ತಿಳಿದು ಬಂದಿದೆ. ವರ್ತೂರಿನಲ್ಲಿ ವ್ಯವಸಾಯ ಮಾಡಿಕೊಂಡಿರುವ ಸಂತೋಷ್‌ ಎತ್ತುಗಳ ಓಟದ ಸ್ಪರ್ಧೆಯಲ್ಲಿಯೂ  ಖ್ಯಾತರಾದವರು. ಅವರು ಹಳ್ಳಿಕಾರ್ ತಳಿಯ ಎತ್ತುಗಳನ್ನು ಸಾಕಿ ಬೆಳೆಸುತ್ತಾರೆ.

ಅಕ್ಟೋಬರ್ 8 ರಿಂದ ಪ್ರಾರಂಭವಾದ ಬಿಗ್​ ಬಾಸ್​ ಸೀಸನ್​ 10  ಶೋ, ಇಂದಿನಿಂದ ಮೂರನೇ ವಾರಕ್ಕೆ ಕಾಲಿಟ್ಟಿದೆ. ವರ್ತೂರು​ ಸಂತೋಷ್​ ಅವರು ಶೋ ಮೂಲಕ ಒಳ್ಳೆ ಫ್ಯಾನ್ಸ್ ಫಾಲೋವಿಂಗ್ ಸಂಪಾದಿಸಿದ್ದಾರೆ. ಎರಡನೇ ವಾರ ಅವರು ನಾಮಿನೇಟ್​ ಆಗಿದ್ರೂ , ಜನರ ವೋಟ್ ಅವರನ್ನು ಮನೆಯಲ್ಲೇ ಉಳಿಯುವಂತೆ ಮಾಡಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!