‘ಮಾಯಾನಗರಿ’ಗೆ ಯು/ಎ ಪ್ರಮಾಣಪತ್ರ

ಶಂಕರ್ ಆರಾಧ್ಯ ನಿರ್ದೇಶನದ ‘ಮಾಯಾನಗರಿ’ ಸಿನಿಮಾ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ.

ಟ ಅನೀಶ್ ನಟನೆಯ  ‘ಮಾಯಾನಗರಿ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದ ಬಿಡುಗಡೆಗೆ ಚಿತ್ರತಂಡ ಕುತೂಹಲದಿಂದ ಎದುರು ನೋಡುತ್ತಿದೆ.  ಕಾಮಿಡಿ, ಲವ್, ಆಕ್ಷನ್ ಮತ್ತು ಸೆಂಟಿಮೆಂಟ್ ಕಥಾಹಂದರವಿರುವ ಈ ಚಿತ್ರಕ್ಕೆ ಶಂಕರ್ ಆರಾಧ್ಯ ಅವರು ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯನ್ನು ತಾವೇ ಬರೆದಿದ್ದಾರೆ.

ಸಿನಿಮಾ ನಿರ್ದೇಶನದ ಕನಸನ್ನು ಹೊತ್ತು ಬರುವ ಯುವ ಪ್ರತಿಭೆಯ ಪಾತ್ರದಲ್ಲಿ ಅನೀಶ್ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಪಿಕ್ಚರ್ಸ್ ಮತ್ತು ಶ್ವೇತಾ ಶಂಕರ್ ನಿರ್ಮಾಣ ಈ ಚಿತ್ರಕ್ಕಿದೆ.

ಚಿತ್ರದಲ್ಲಿ ಅನೀಶ್ ಜೊತೆಗೆ ಶ್ರಾವ್ಯ ರಾವ್ ಮತ್ತು ತೇಜು ಜೋಡಿಯಾಗಿ ನಟಿಸಿದ್ದಾರೆ. ಇವರೊಂದಿಗೆ, ಶರತ್ ಲೋಹಿತಾಶ್ವ, ಅವಿನಾಶ್ ಮತ್ತು ಸುಚೇಂದ್ರ ಪ್ರಸಾದ್ ಮುಂತಾದ ನಟರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿದ್ದಾರೆ.

‘ಮಾಯಾನಗರಿ’ಗೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ವಿಕ್ರಮ್ ಮೋರ್ ಅವರು ಚಿತ್ರಕ್ಕೆ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.  ಶ್ರೀನಿವಾಸ್ ಅವರ ಛಾಯಾಗ್ರಹಣ ಇದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!