‘ಒನ್ ಅಂಡ್ ಹಾಫ್’ ಫಸ್ಟ್ ಲುಕ್ ರಿಲೀಸ್

 ಮಾನ್ವಿತಾ ಹರೀಶ್ ನಟನೆಯ ಹೊಸ ಸಿನಿಮಾ ‘ಒನ್ ಅಂಡ್ ಹಾಫ್’ ಫಸ್ಟ್ ಲುಕ್ ರಿಲೀಸ್ ಆಗಿದೆ.

ಮಾನ್ವಿತಾ ಹರೀಶ್ ಮುಖ್ಯ ಪಾತ್ರದಲ್ಲಿರುವ ವಿಭಿನ್ನ ಕಥೆಯ ಈ ಸಿನಿಮಾಕ್ಕೆ ದಿ ವೆಕೆಂಟ್ ಹೌಸ್ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಯುವ ಪ್ರತಿಭೆ ಶ್ರೇಯಸ್ ಚಿಂಗಾ ಆಕ್ಷನ್ ಕಟ್‌ ಹೇಳಿದ್ದಾರೆ. ಜೊತೆಗೆ ತಾವೇ ನಾಯಕ ನಟನಾಗಿಯೂ ಅಭಿನಯಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋಸ್ ನಲ್ಲಿ ಸುಲಕ್ಷ್ಮೀ ಫಿಲಂಸ್ ನಿರ್ಮಾಣ ಸಂಸ್ಥೆಯ ಲೋಗೋ ಹಾಗೂ ಒನ್ ಅಂಡ್ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಮಾನ್ವಿತಾ ಹರೀಶ್, “ಈ ಸಿನಿಮಾ ಮಾಡಲು ತುಂಬಾ ಕಾರಣಗಳಿವೆ. ಶ್ರೇಯಸ್ ಹೇಳಿದ ಕಥೆ ಇಷ್ಟವಾಯ್ತು. ಶ್ರೇಯಸ್ ಒಳ್ಳೆ ನಟ. ಒಳ್ಳೆ ಬರಹಗಾರ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವ ಅನುಭವ. ನನ್ನ ಪಾತ್ರದ ಹೆಸರು ನಿಧಿ. ನಿಧಿ ಇಲ್ಲಿ ಟ್ರಬಲ್ ಮೇಕರ್” ಎಂದು ಹೇಳಿದ್ದಾರೆ.

ಇದು ಕಂಪ್ಲೀಟ್ ಕಾಮಿಡಿ ಸಿನಿಮಾ.  ಸಿನಿಮಾದಲ್ಲಿ ನಾಯಕನಿಗೆ ‘ಕನ್ನಡ’ ಎಂದು ಹೆಸರಿಡಲಾಗಿದೆ. ಬೆಂಗಳೂರು, ಗೋವಾ ಭಾಗದಲ್ಲಿ ಶೂಟಿಂಗ್ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ಎಂದು ನಿರ್ದೇಶಕ ಮತ್ತು ನಾಯಕ ಶ್ರೇಯಸ್ ಚಿಂಗಾ ಹೇಳಿದ್ದಾರೆ.

ಸಾಧು ಕೋಕಿಲಾ, ಅನಿನಾಶ್ ಯೆಳಂದೂರ್, ಸುಚೇಂದ್ರ ಪ್ರಸಾದ್, ಸ್ಪರ್ಶ ರೇಖಾ, ಅನಂತು, ಸುಂದರಶ್ರೀ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕುಮಾರ್, ಮಹಾಂತೇಶ್ ಹಿರೇಮಠ್, ನಿಕಿತಾ ದೋರ್ತೊಡಿ, ಲಲಿತಾ ನಾಯಕ್, ರೋಹಿತ್ ಅರುಣ್, ಅಮಾನ್, ರಾಖಿ ಭೂತಪ್ಪ ತಾರಾಬಳಗದಲ್ಲಿದ್ದಾರೆ.

ಸಿನಿಮಾಗೆ ದೇವೇಂದ್ರ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತವಿದೆ. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರದ ಹೊಂದಿರುವ ಒನ್ ಅಂಡ್ ಆಫ್ ಸಿನಿಮಾವನ್ನು ಸುಲಕ್ಷ್ಮೀ ಫಿಲಂಸ್ ನಡಿ ಚರಣ್ ಸುಬ್ಬಯ್ಯ ನಿರ್ಮಾಣ ಮಾಡುತ್ತಿದ್ದಾರೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!