ಡಿಸೆಂಬರ್ 29ರಂದು ‘ಕಾಟೇರ’ ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕಾಟೇರ’  ಡಿಸೆಂಬರ್ 29ರಂದು ಬಿಡುಗಡೆಯಾಗಲಿದೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಆರಂಭದಿಂದಲೂ ಭಾರೀ ನಿರೀಕ್ಷೆ ಮೂಡಿಸಿದೆ.  ಚಿತ್ರತಂಡ ಕೊಟ್ಟ ದಿಢೀರ್  ರಿಲೀಸ್ ಡೇಟ್ ಅಪ್‌ಡೇಟ್ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ.

ಡಿಸೆಂಬರ್ 22ಕ್ಕೆ ಪ್ರಭಾಸ್ ಅಭಿನಯದ ‘ಸಲಾರ್’, ಹಾಗೂ ಶಾರುಖ್ ನಟನೆಯ ‘ಡಂಕಿ’ ಸಿನಿಮಾಗಳು ರಿಲೀಸ್ ಆಗಲಿವೆ. ಒಂದು ವಾರದ ಅಂತರದಲ್ಲಿ ‘ಕಾಟೇರ’ ಸಿನಿಮಾ ಬಿಡುಗಡೆಯಾಗಲಿದೆ.

‘ಕಾಟೇರ’ ಚಿತ್ರದಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.  ಜಗಪತಿ ಬಾಬು, ಶ್ರೀನಿವಾಸ್ ಮೂರ್ತಿ, ಬಿರಾದಾರ್, ಶ್ರುತಿ, ಕುಮಾರ್ ಗೋವಿಂದ್ ಚಿತ್ರದ ತಾರಾಗಣದಲ್ಲಿದ್ದಾರೆ.

70ರ ದಶಕದ ಕತೆಯನ್ನು ‘ಕಾಟೇರ’ ಚಿತ್ರದಲ್ಲಿ ಹೇಳಲಾಗುತ್ತಿದೆ. ‘ಉಳುವವನೆ ಭೂಮಿಯ ಒಡೆಯ’ ಕಾಯ್ದೆ ಜಾರಿಯಾದಾಗ ಹಳ್ಳಿಗಳಲ್ಲಿ ನಡೆದ ಸಂಘರ್ಷದ ಕತೆ ಚಿತ್ರದಲ್ಲಿದೆ. ವಿ. ಹರಿಕೃಷ್ಣ ಸಂಗೀತ, ಮಾಸ್ತಿ ಸಂಭಾಷಣೆ ಹಾಗೂ ಸುಧಾಕರ್ ರಾಜ್ ಛಾಯಾಗ್ರಹಣ ಚಿತ್ರಕ್ಕಿದೆ.

ಕಾಟೇರ ಸಿನಿಮಾ ತರುಣ್ ಸುದೀರ್‌ ಹಾಗೂ ದರ್ಶನ್ ಕಾಂಬಿನೇಷನ್‌ನ ಎರಡನೇ ಚಿತ್ರವಾಗಿದೆ. ಈ ಹಿಂದೆ 2021 ರಲ್ಲಿ ಬ್ಲಾಕ್‌ಬಸ್ಟರ್ ರಾಬರ್ಟ್‌ ಸಿನಿಮಾದಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!