ಆರ್ ಕೆ ನಿರ್ದೇಶಿಸಿರುವ “ಕಾಣೆಯಾಗಿದ್ದಾಳೆ” ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ.
ಇತ್ತೀಚಿಗೆ ಈ ಚಿತ್ರದ ಹಾಡೊಂದನ್ನು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಮೇಯರ್ ಯೋಗೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.
ಇದು ನೈಜ ಹಾಗೂ ಕಾಲ್ಪನಿಕ ಕಥಾಧಾರಿತ ಚಿತ್ರ. ಸಾಮಾಜಿಕ ಜಾಲತಾಣಗಳನ್ನು ಹೆಣ್ಣುಮಕ್ಕಳು ನಿಯಮಿತವಾಗಿ ಬಳಸಬೇಕು. ಇಲ್ಲದಿದ್ದರೆ ಅಪಾಯ ಖಂಡಿತ ಎಂಬ ವಿಷಯವನ್ನು ಈ ಚಿತ್ರದ ಮೂಲಕ ಹೇಳಿದ್ದೇವೆ. ಕರ್ನಾಟಕದ 30-40 ಸುಂದರ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರ ಡಿಸೆಂಬರ್ ನಲ್ಲಿ ತೆರೆಗೆ ಬರಲಿದೆ ಎಂದು ನಿರ್ದೇಶಕ ಆರ್ ಕೆ ತಿಳಿಸಿದರು.
ಇದು ನನ್ನ ಮೊದಲ ಚಿತ್ರ. ನನ್ನದು ಕಾಲೇಜು ಹುಡುಗನ ಪಾತ್ರ. ತಾಯಿ – ಮಗನ ಬಾಂಧವ್ಯದ ಸನ್ನಿವೇಶಗಳು ಚಿತ್ರದ ಹೈಲೆಟ್ ಎಂದು ನಾಯಕ ವಿನಯ್ ಕಾರ್ತಿ ಹೇಳಿದರು.
ಹಳ್ಳಿಯಿಂದ ನಗರಕ್ಕೆ ಬಂದ ಹುಡುಗಿಯ ಪಾತ್ರ ನನ್ನದು. ನಿರ್ದೇಶಕರು ಕಥೆ ತುಂಬಾ ಚೆನ್ನಾಗಿ ಮಾಡಿದ್ದಾರೆ ಎಂದು ಕೀರ್ತಿ ಭಟ್ ತಿಳಿಸಿದರು.
ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನು ನಾಯಕನ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಯಶೋಧ ಹಾಗೂ ಕೃಷ್ಣನ ಪ್ರೀತಿ ತರಹ ಈ ತಾಯಿ – ಮಗನ ಪ್ರೀತಿ ಎಂದರು ಹಿರಿಯ ನಟಿ ಗಿರಿಜಾ ಲೋಕೇಶ್.
ಚಿತ್ರದ ಮತ್ತೊಬ್ಬ ನಾಯಕಿ ಹರ್ಷಿತಾ ಕಲಿಂಗಲ್ ಚಿತ್ರದ ಕುರಿತು ಮಾತನಾಡಿದರು.
Be the first to comment