ಸರ್ಕಾರದ ಲಿಡ್ಕರ್ ಬ್ರಾಂಡ್‌ಗೆ ʻಡಾಲಿʼ ರಾಯಭಾರಿ!

ಸ್ಯಾಂಡಲ್‌ವುಡ್ ನಲ್ಲಿ ನಟನಾಗಿ ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಚರ್ಮ ಕುಶಲಕರ್ಮಿಗಳ ಕುಟುಂಬದ ನೆರವಿಗೆನಿಂತಿದ್ದಾರೆ.

ವಿಶೇಷ ಎಂದರೆ ಲಿಡ್ಕರ್ ರಾಯಭಾರಿಯಾಗಲು ಧನಂಜಯ ಅವರು ಒಂದು ರೂಪಾಯಿ ಸಂಭಾವನೆಯನ್ನು ಕೂಡ ಪಡೆದಿಲ್ಲ. ಉಚಿತವಾಗಿ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುವ ಮೂಲಕ  ಧನಂಜಯ್ ಮಾದರಿಯಾಗಿದ್ದಾರೆ. ಈ ಮೂಲಕ ಪುನೀತ್‌ ರಾಜ್‌ ಕುಮಾರ್‌ ಅವರ ಮಾಋಗವನ್ನೇ ಅನುಸರಿಸಿದ್ದಾರೆ.

ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಇದೀಗ ರಾಯಭಾರಿಯನ್ನ ಆಯ್ಕೆ ಮಾಡಿ ಈ ನಿಗಮವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರಕ್ಕೆ ಡಾಲಿ ರಾಯಾಭಾರಿಯಾಗುವ ಮೂಲಕ ಬಡವರ ಮಕ್ಕಳು ಬೆಳಿಬೇಕು ಎನ್ನುವುದನ್ನು ಮತ್ತೆ ಸಾರಿ ಹೇಳಿದ್ದಾರೆ.

‘ಇದರ ಅಡಿ ಐವತ್ತು ಸಾವಿರ ಕುಟುಂಬವಿದೆ. ನಮ್ಮದೇ ಆದ ಬ್ರಾಂಡಿಗೆ ನಾವು ಸಹಾಯ ಮಾಡಬೇಕು ಎನ್ನುವ ಕಾರಣಕ್ಕೆ ಇದನ್ನು ಒಪ್ಪಿಕೊಂಡೆ. ಮೇಕ್ ಇನ್ ಇಂಡಿಯಾ ಹೇಗಿದೆಯೋ ಹಾಗೆ ಮೇಕ್ ಇನ್ ಕರ್ನಾಟಕ ಆಗಬೇಕು. ಲಿಟ್ಕರ್ ಗೆ ಸಪೋರ್ಟ್ ಮಾಡುವುದರಿಂದ ಅದನ್ನೆ ನಂಬಿಕೊಂಡ ಕುಟುಂಬಗಳಿಗೆ ಸಹಾಯವಾಗಲಿದೆ. ಮೈಸೂರ್ ಸಿಲ್ಕ್ ಹೇಗಿದಿಯೋ ಹಾಗೆ ನಮ್ಮದೆ ಬ್ರ್ಯಾಂಡ್ ಇರಬೇಕು’ ಎಂದು ಡಾಲಿ ಧನಂಜಯ ಹೇಳಿದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!