Ranaksha: ‘ರಣಾಕ್ಷ’ ಟೀಸರ್ ರಿಲೀಸ್

ಸಸ್ಪೆನ್ಸ್ , ಥ್ರಿಲ್ಲರ್ ಚಿತ್ರ ‘ರಣಾಕ್ಷ’ ಚಿತ್ರದ ಹಾಡುಗಳು ಹಾಗೂ ಟೀಸರ್ ನ್ನು ಸಾಹಿತಿ, ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಬಿಡುಗಡೆ ಮಾಡಿದರು.

ವಿ. ನಾಗೇಂದ್ರ ಪ್ರಸಾದ್ ಮಾತನಾಡಿ, ನಾನು ಈ ಚಿತ್ರದ ಬಗ್ಗೆ ಯಾವುದೇ ನಿರೀಕ್ಷೆ ಇಟ್ಕೊಂಡು ಬಂದಿರಲಿಲ್ಲ, ಆದರೆ ಟೀಸರ್ ಹಾಗೂ ಹಾಡುಗಳನ್ನು ನೋಡಿದ ಮೇಲೆ ತಂಡದ ಶ್ರಮ ಕಾಣುತ್ತದೆ. ಈ ಚಿತ್ರದ ಹಾಡುಗಳು ಕೇಳಿದಾಗ  ಬಹಳ ಖುಷಿ ಎನಿಸಿತು.  ಮೂರು ಹಾಡುಗಳು ಹೊಸತನ ಮೂಡಿಸುತ್ತದೆ. ಸಂಗೀತ ನಿರ್ದೇಶಕ ವಿಶಾಲ್ ಅಲಾಪ್ ಕೆಲಸ ಸೊಗಸಾಗಿದೆ. ಅದೇ ರೀತಿ ಗಾಯಕರಿಗೂ ಕೂಡ ಉತ್ತಮ ಭವಿಷ್ಯವಿದೆ. ಪೂರ್ಣ ಪ್ರಮಾಣದ ನಾಯಕನಾಗಿ ಬೆಳ್ಳಿ ಪರದೆಗೆ ಬರುತ್ತಿರುವ ರಘು, ನಾಯಕಿಯರಾದ ರಕ್ಷಾ ಹಾಗೂ ರೋಹಿ ಸೇರಿದಂತೆ ಇಡೀ ಚಿತ್ರತಂಡಕ್ಕೆ ಯಶಸ್ಸು ಸಿಗಲಿ’ ಎಂದು ಶುಭ ಕೋರಿದರು.

ಚಿತ್ರದ ನಿರ್ದೇಶಕ ರಾಘವ ಮಾತನಾಡಿ, ‘ರಣಾಕ್ಷ ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ. ಇದೊಂದು ಸಸ್ಪೆನ್ಸ್ , ಥ್ರಿಲ್ಲರ್ ಕಥೆ ಒಳಗೊಂಡ ಚಿತ್ರ.  ಯಾವುದೇ ಮಂತ್ರ , ತಂತ್ರ , ಶಕ್ತಿ ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು. ಅದು ಹೇಗೆ ಎಂಬುದನ್ನು ಚಿತ್ರದಲ್ಲಿ ನೋಡಬೇಕು. ಬಹಳ ಶ್ರಮವಹಿಸಿ ಒಂದು ವಿಭಿನ್ನ ಚಿತ್ರವನ್ನು ನಿಮ್ಮ ಮುಂದೆ ತರುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹ , ಸಹಕಾರ ನಿರಂತರವಾಗಿ ಇರಲಿ ಎಂದರು.

ನಿರ್ಮಾಪಕ ರಾಮು ಮಾತನಾಡುತ್ತಾ ನನಗೂ ಸಿನಿಮಾ ಮಾಡಬೇಕೆಂಬ ಆಸೆ ಇತ್ತು. ಒಂದು ಚಿತ್ರ ಮಾಡಿದರೆ ನಮಗೊಂದು ಹೆಸರು ಬರುತ್ತ.  ಈ ಚಿತ್ರವನ್ನು ಗೆಲ್ಲಿಸಿದರೆ ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆ ಇದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೋಹನ್ ರಾವ್ ನಾಲ್ವಡೆ, ರಮೇಶ್ ಗೌಡ , ಗಿರೀಶ್ ಗೌಡ, ಲಕ್ಷ್ಮಣ್ ಪಡಿಮನಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!