‘ಫುಲ್ ಮೀಲ್ಸ್’ ಶೀಘ್ರ ತೆರೆಗೆ

ಲಿಖಿತ್ ಶೆಟ್ಟಿ ನಾಯನಾಗಿ ನಟಿಸಿರುವ ‘ಫುಲ್ ಮೀಲ್ಸ್’ ಶೀಘ್ರದಲ್ಲೇ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.

 ‘ಫುಲ್ ಮೀಲ್ಸ್’  ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಅರಮನೆ ಆವರಣದಲ್ಲಿ ಚಿತ್ರೀಕರಣ ಆರಂಭಿಸಿದ್ದ ಚಿತ್ರತಂಡ, ಕನಕಪುರ ರಸ್ತೆಯ ರೆಸಾರ್ಟ್ ಒಂದರಲ್ಲಿ ಕುಂಬಳಕಾಯಿ ಒಡೆದು ಚಿತ್ರೀಕರಣ ಮುಗಿಸಿದೆ.

 ‘ಸಂಕಷ್ಟ ಕರ ಗಣಪತಿ’ ‘ಫ್ಯಾಮಿಲಿ ಪ್ಯಾಕ್’ ಸಿನಿಮಾಗಳ  ನಾಯಕ ಲಿಖಿತ್ ಶೆಟ್ಟಿ ಫುಲ್ ಮೀಲ್ಸ್ ಸಿನಿಮಾ ಜನರಿಗೆ ಇಷ್ಟವಾಗುವ ಭರವರಸೆಯನ್ನು ಹೊಂದಿದ್ದಾರೆ. ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಲಿಖಿತ್ ಶೆಟ್ಟಿಗೆ ನಾಯಕಿಯರಾಗಿದ್ದಾರೆ. ಕಿರುಚಿತ್ರದ ಮೂಲಕ ಗುರುತಿಸಿಕೊಂಡಿದ್ದ ಎನ್ ವಿನಾಯಕ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದಾರೆ.

ಚಿತ್ರದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ದೊಡ್ಡ ತಾರಾ ಬಳಗ ಇದೆ.

ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ ಚಿತ್ರಕ್ಕಿದೆ.

——

Be the first to comment

Leave a Reply

Your email address will not be published. Required fields are marked *

Translate »
error: Content is protected !!