ಜಪಾನ್‌ನಲ್ಲಿ ‘ಪುಷ್ಪ 2’ ಸಿನಿಮಾ ಶೂಟಿಂಗ್

ಅಲ್ಲು ಅರ್ಜುನ್ , ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾದ ಮುಂದಿನ ಹಂತದ ಶೂಟಿಂಗ್ ಜಪಾನ್‌ನಲ್ಲಿ ಸಾಗಲಿದೆ.

ಸದ್ಯ ಹೈದರಾಬಾದ್‌ನಲ್ಲಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ‘ಪುಷ್ಪ: ದಿ ರೈಸ್’ ನ ಮೊದಲ ಭಾಗದಲ್ಲಿ ವಿದೇಶದ ರೆಫರೆನ್ಸ್ ನೀಡಲಾಗಿತ್ತು. ರಕ್ತಚಂದನ ಜಪಾನ್‌ಗೆ ರಫ್ತಾಗಲಿದೆ ಎಂದು ತೋರಿಸಲಾಗಿತ್ತು. ಈಗ ಎರಡನೇ ಭಾಗದಲ್ಲಿ ಸಿನಿಮಾದ ಒಂದಷ್ಟು ಕಥೆ ವಿದೇಶದಲ್ಲೇ ಸಾಗಲಿದೆ ಎನ್ನಲಾಗಿದೆ.

ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್, ರಶ್ಮಿಕಾ ಸೇರಿದಂತೆ ಇಡೀ ಟೀಮ್ ಜಪಾನ್ ಹೋಗಲಿದೆ. ಅಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದ್ದು, ವಿದೇಶಿ ಕಲಾವಿದರು ಕೂಡ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಈ ಚಿತ್ರದಲ್ಲಿ ಶ್ರೀವಲ್ಲಿ ಪಾತ್ರ ಮತ್ತಷ್ಟು ಪವರ್‌ಫುಲ್ ಆಗಿ ತೋರಿಸಲು ನಿರ್ದೇಶಕರು ಯೋಚಿಸಿದ್ದಾರೆ ಎನ್ನಲಾಗುತ್ತಿದೆ.

ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಲಿದೆ. ಕಾರಣಾಂತರಗಳಿಂದ ಸಿನಿಮಾ ಕೆಲಸಗಳು ವಿಳಂಬ ಆಗಿದ್ದವು. ಹೀಗಾಗಿ ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಲಿದೆ ಎಂದು ಕೆಲವರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಇತ್ತೀಚೆಗೆ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಯಿತು. ಈ ಪೋಸ್ಟರ್​ನಲ್ಲಿ ಸಿನಿಮಾದ ಬಿಡುಗಡೆ ದಿನಾಂಕ ಆಗಸ್ಟ್ 15 ಎಂದೇ ಇದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!