ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿರುವ ಧನ್ವೀರ್ ‘ಹಯಗ್ರೀವ’ನಾಗಿ ತೆರೆಗೆ ಬರಲು ಸಜ್ಜಾಗಿದ್ದಾರೆ.
ಚಿತ್ರದ ಮುಹೂರ್ತ ಇತ್ತೀಚೆಗೆ ನಾಡದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆಯಿತು. ಈ ಚಿತ್ರಕ್ಕೆ ರಘುಕುಮಾರ್ ಒ.ಆರ್ ಆಕ್ಷನ್ ಕಟ್ ಹೇಳಲಿದ್ದಾರೆ.
‘ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್ ಇದೆ. ಪ್ರೀತಿ, ಭಾವನಾತ್ಮಕ ಅಂಶಗಳ ಜೊತೆಗೆ ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ. ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ‍್ಳುತ್ತಿದ್ದಾರೆ’ ಎಂದು ರಘುಕುಮಾರ್ ಮಾಹಿತಿ ಹಂಚಿಕೊಂಡರು.
‘ಬಹಳ ದಿನಗಳಿಂದ ಯೋಜನೆ ರೂಪಿಸಿ ಈ ಚಿತ್ರದ ಚಿತ್ರೀಕರಣಕ್ಕೆ ಇಳಿಯುತ್ತಿದ್ದೇವೆ. ‘ಬಜಾರ್’ ನಂತರ ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿಕೊಳ್ಳುತ್ತಿದ್ದೇನೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಇದು ನನ್ನ ಐದನೇ ಚಿತ್ರ’ ಎಂದರು ಧನ್ವೀರ್.
ಸಮೃದ್ಧಿ ಮಂಜುನಾಥ್ ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಧನ್ವೀರ್‌ಗೆ ಜೋಡಿಯಾಗಿ ‘ಸಲಗ’ ಖ್ಯಾತಿಯ ಸಂಜನಾ ಆನಂದ್ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಮತ್ತೊಬ್ಬ ನಾಯಕನಿದ್ದು, ಚಿತ್ರ ಬಿಡುಗಡೆಯವರೆಗೂ ಇದನ್ನು ಗೌಪ್ಯವಾಗಿಡಲಾಗುವುದು ಎಂದಿದೆ ಚಿತ್ರತಂಡ.
—–
Post Views:
135
Be the first to comment