ಬಹು ನಿರೀಕ್ಷಿತ ‘ಧೀರ ಸಾಮ್ರಾಟ್’ ಫೆಬ್ರವರಿ 16ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.
ಪವನ್ ಕುಮಾರ್ ನಿರ್ದೇಶನದ ಈ ಸಿನಿಮಾದಲ್ಲಿ ರಾಕೇಶ್ ಬಿರಾದರ್ ನಾಯಕ ನಟನಾಗಿದ್ದು, ಜೋಡಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ.
ಕುಟುಂಬ ಸಮೇತ ನೋಡಬಹುದಾದ ಸೆಸ್ಪನ್ಸ್ ಥ್ರಿಲ್ಲರ್ ಕಥೆಯಲ್ಲಿ ಐದು ಧೀರ ಹುಡುಗರ ಗೆಳತನ ಹೇಗಿರುತ್ತೆ ಎಂಬುದನ್ನು ಹೇಳಲಾಗಿದೆ. ಪವನ್ಕುಮಾರ್(ಪಚ್ಚಿ) ಸಿನಿಮಾಕ್ಕೆ ಕಥೆ ಬರೆದು ನಿರ್ದೇಶನ ಮಾಡುವ ಜತೆಗೆ ನಕರಾತ್ಮಕ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ತನ್ವಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಗುರುಬಂಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರಾಘವ್ ಸುಭಾಷ್ ಸಂಗೀತ ಸಂಯೋಜನೆ ನೀಡಿದ್ದಾರೆ. ಸತೀಶ್ ಚಂದ್ರ ಸಂಕಲನ, ಅರುಣ್ ಸುರೇಶ್ ಛಾಯಾಗ್ರಹಣವಿದೆ. ಈಗಾಗಲೇ ಟ್ರೈಲರ್ ಮೂಲಕ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.
ಬಾಲರಾಜ್ವಾಡಿ, ಸೇರಿದಂತೆ ನಾಗೇಂದ್ರ ಯು ಆರ್, ಎಸ್ ಯತಿರಾಜ್, ರವೀಂದ್ರನಾಥ್, ಹರೀಶ್ ಅರಸು, ರಮೇಶ್ ಭಟ್, ಶೋಭರಾಜ್, ಮಂಡ್ಯ ಚಂದ್ರು, ಮನಮೋಹನ್ ರಾಯ್, ಮತ್ತು ಇಂಚರ ಪಾತ್ರ ವರ್ಗದಲ್ಲಿದ್ದಾರೆ.
ಬೆಂಗಳೂರು, ತುಮಕೂರು, ಚಿತ್ರದುರ್ಗದಲ್ಲಿ ಚಿತ್ರೀಕರಣ ನಡೆಸಲಾಗಿದೆ. ‘ಧೀರ ಸಾಮ್ರಾಟ್’ ಯುಎ ಪ್ರಮಾಣಪತ್ರ ಪಡೆದುಕೊಂಡಿದೆ.
——
Post Views:
127
Be the first to comment