ಧನಂಜಯ್ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕಾಂಗ್ರೆಸ್ ಪಕ್ಷದಲ್ಲಿ ಆ ರೀತಿ ಯಾವುದೇ ಚರ್ಚೆ ಆಗಿಲ್ಲ. ನನಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಗಾಳಿ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ.
ಕರ್ನಾಟಕ ಸರಕಾರ ಧನಂಜಯ್ ಅವರನ್ನು ಲಿಡ್ಕರ್ ಸಂಸ್ಥೆಗೆ ರಾಯಭಾರಿಯನ್ನಾಗಿ ನೇಮಿಸಿಕೊಂಡಿದೆ. ಜೊತೆಗೆ ಧನಂಜಯ್ ಕಾಂಗ್ರೆಸ್ ಮೆಚ್ಚುವಂತಹ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ. ಧನಂಜಯ್ ನಿರ್ಮಾಣದ ಡೇರ್ ಡೆವಿಲ್ ಮುಸ್ತಾಫಾಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಂಸೆ ವ್ಯಕ್ತ ಪಡಿಸಿದ್ದರು. ಇವೆಲ್ಲ ಕಾರಣದಿಂದಾಗಿ ಕಾಂಗ್ರೆಸ್ ಪಕ್ಷದಿಂದ ಡಾಲಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮುಖ್ಯಮಂತ್ರಿ ಗಾಳಿಸುದ್ದಿಗೆ ಬ್ರೇಕ್ ಹಾಕಿದ್ದಾರೆ.
ಡಾಲಿ ಧನಂಜಯ ಅವರು ನಟ, ನಿರ್ಮಾಪಕನಾಗಿ ಜನಪ್ರಿಯತೆಯನ್ನು ಪಡೆದಿದ್ದಾರೆ. ಸಿನಿಮಾಗಳನ್ನು ನಿರ್ಮಿಸಿ ಹೊಸ ಅಲೆ ಕ್ರಿಯೇಟ್ ಮಾಡಿದ್ದಾರೆ. ಬಡವರ ಮಕ್ಕಳು ಬೆಳೀಬೇಕು ಎನ್ನುವ ಡಾಲಿ ಧನಂಜಯ್ ಗೆ ಫ್ಯಾನ್ ಫಾಲೋಯಿಂಗ್ ಅಪಾರವಾಗಿದೆ.
ಸಾಲು ಸಾಲು ಸಿನಿಮಾಗಳಲ್ಲಿ ಡಾಲಿ ಧನಂಜಯ್ ಬ್ಯುಸಿ ಆಗಿದ್ದಾರೆ. ರಾಜಕೀಯ ಸ್ಪರ್ಧೆ ಬಗ್ಗೆ ಡಾಲಿ ಯಾವುದೇ ಸ್ಪಷ್ಟನೆ ನೀಡಿಲ್ಲ.
—–
Be the first to comment