ಸಂಚಾರ ದಟ್ಟಣೆ ಕಾರಣ ನೀಡಿ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಚಲನಚಿತ್ರ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದೆ.
ಕಳೆದ ಭಾನುವಾರ ಚರ್ಚ ಸ್ಟ್ರೀಟ್ನಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದುದನ್ನು ಗಮನಿಸಿದ ಬಿಬಿಎಂಪಿ ಈ ಆದೇಶ ಹೊರಡಿಸಿದೆ. ಚರ್ಚ್ ಸ್ಟ್ರೀಟ್ ಜನನಿಬಿಡ ರಸ್ತೆ. ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಸಿನಿಮಾ ಚಿತ್ರೀಕರಣದಿಂದ ಕಳೆದ ಭಾನುವಾರ ಚರ್ಚ್ ಸ್ಟ್ರೀಟ್ನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಪಾದಚಾರಿ ಮಾರ್ಗದಲ್ಲಿ ಶೂಟಿಂಗ್ ಮಾಡುತ್ತಿದ್ದರೂ, ನೂರಾರು ಜನರು ವೀಕ್ಷಿಸಲು ನಿಂತಿದ್ದರು. ಸೂಕ್ತ ಅನುಮತಿ ಪಡೆಯದೆ ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಕೇಂದ್ರೀಯ ಡಿಸಿಪಿ ಶೇಖರ್ ಎಚ್.ತೆಕ್ಕನವರ್ , ನಾವು ಸಿನಿಮಾ ಶೂಟಿಂಗ್ಗೆ ಅನುಮತಿ ನೀಡಿಲ್ಲ. ಬಹುತೇಕ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.
ಕೆಎಫ್ಸಿಸಿ ಅಧ್ಯಕ್ಷ ಎನ್.ಎಂ.ಸುರೇಶ್, ನಾವು ಯಾವುದೇ ಅನುಮತಿ ನೀಡಿಲ್ಲ. ಅನುಮತಿ ನೀಡಲು ನಮಗೆ ಯಾವುದೇ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶೂಟಿಂಗ್ ಕೇವಲ ಸಂಚಾರಕ್ಕೆ ಅಡ್ಡಿಯಾಗುವುದಿಲ್ಲ. ನಿಧಾನಗತಿಯ ಸಂಚಾರದಿಂದ ಜನರು ಇಲ್ಲಿಗೆ ಬರದೆ ಬೇರೆ ಬೇರೆ ಪ್ರದೇಶಗಳಿಗೆ ಹೋಗುತ್ತಾರೆ. ಪೀಕ್ ಅವರ್ನಲ್ಲಿ ನನ್ನ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ ಎಂದು ಹೋಟೆಲ್ ಉದ್ಯಮಿಯೊಬ್ಬರು ಹೇಳಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಚರ್ಚ್ ಸ್ಟ್ರೀಟ್ನಲ್ಲಿ ಚಲನಚಿತ್ರಗಳ ಚಿತ್ರೀಕರಣವನ್ನು ನಿರ್ಬಂಧಿಸಲಾಗಿದೆ. ಚಿತ್ರೀಕರಣಕ್ಕೆ ಪೊಲೀಸರು ಅಥವಾ ಕೆಎಫ್ಸಿಸಿ ಅನುಮತಿ ನೀಡಲು ಸಾಧ್ಯವಿಲ್ಲ. ಅದೊಂದು ಜನನಿಬಿಡ ರಸ್ತೆ. ಸಿನಿಮಾ ಚಿತ್ರೀಕರಣ ಸಂಚಾರಕ್ಕೆ ಅಡ್ಡಿಯಾಗಲಿದೆ. ಹೀಗಾಗಿ ಚಿತ್ರೀಕರಣಕ್ಕೆ ಬಿಬಿಎಂಪಿ ನಿರ್ಬಂಧಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Be the first to comment