ಗಣೇಶ್ ನಟನೆಯ ಮುಂಬರುವ ಚಿತ್ರ ‘ಕೃಷ್ಣಂ ಪ್ರಣಯ ಸಖಿ’ ಚಿತ್ರೀಕರಣ ಮುಕ್ತಾಯದ ಹಂತದಲ್ಲಿದ್ದು, ವಿಯೆಟ್ನಾಂನಲ್ಲಿ ಅಂತಿಮ ಹಂತದ ಚಿತ್ರೀಕರಣಕ್ಕೆ ತಯಾರಿ ನಡೆಸುತ್ತಿದೆ.
ಎರಡು ಹಾಡು ಮತ್ತು ಕೆಲವು ಹೆಚ್ಚುವರಿ ದೃಶ್ಯಗಳಿಗೆ ಪ್ಲಾನ್ ಮಾಡಿದ್ದೇವೆ ಎಂದು ನಿರ್ದೇಶಕ ಶ್ರೀನಿವಾಸ್ ರಾಜು ತಿಳಿಸಿದ್ದಾರೆ.
ನಿರ್ದೇಶಕರು ಸದ್ಯ ಅವರು ವಿಯೆಟ್ನಾಂನಲ್ಲಿದ್ದು, ಗಣೇಶ್, ಮಾಳವಿಕಾ ನಾಯರ್ ಮತ್ತು ಶರಣ್ಯ ಶೆಟ್ಟಿ ಮಾರ್ಚ್ ಮೊದಲ ವಾರದಲ್ಲಿ ಅವರೊಂದಿಗೆ ಸೇರಿಕೊಳ್ಳಲಿದ್ದಾರೆ.
‘ನಾನು ಈ ಶೆಡ್ಯೂಲ್‌ನಲ್ಲಿ ಚಿತ್ರೀಕರಣವನ್ನು ಮುಗಿಸುತ್ತೇನೆ. ಅಗತ್ಯವಿದ್ದರೆ ಉಳಿದಿರುವ ಯಾವುದೇ ದೃಶ್ಯಗಳನ್ನು ಮೈಸೂರಿನಲ್ಲಿ ಶೂಟ್ ಮಾಡುತ್ತೇನೆ’ ಎಂದು ಶ್ರೀನಿವಾಸ್ ರಾಜು ತಿಳಿಸಿದ್ದಾರೆ.
ಗಣೇಶ್ ಮತ್ತು ನಿರ್ದೇಶಕ ಶ್ರೀನಿವಾಸ್ ರಾಜು ಅವರ ಮೊದಲ ಚಿತ್ರ ಇದಾಗಿದೆ. ಸುಧಾರಾಣಿ, ಸಾಧು ಕೋಕಿಲ ಮತ್ತು ಗಿರಿ ಶಿವಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ತ್ರಿಶೂಲ್ ಎಂಟರ್ಟೈನ್‌ಮೆಂಟ್ಸ್ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.
‘ಬಾನದಾರಿಯಲ್ಲಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಗಣೇಶ್ ಸದ್ಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಅವರು ತಮ್ಮ ಮುಂದಿನ ಯೋಜನೆಯನ್ನು ಇನ್ನೂ ಘೋಷಿಸಿಲ್ಲ.
Be the first to comment