ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ನೇಮಕ ಆಗಿದ್ದಾರೆ.
ಸಾಧು ಕೋಕಿಲಾ ಅವರನ್ನುಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ ಚಲನಚಿತ್ರ ಅಕಾಡೆಮಿ ಸೇರಿದೆ.
ಹಲವು ದಿನಗಳಿಂದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಹಲವಾರು ಹೆಸರುಗಳು ಕೇಳಿ ಬಂದಿದ್ದವು. ಅದರಲ್ಲಿ ಸಾಧು ಕೋಕಿಲಾ ಹೆಸರೂ ಸಹ ಸೇರಿಕೊಂಡಿತ್ತು.
ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಮತ್ತು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಸಾಧು ಕೋಕಿಲಾ ಅವರನ್ನೇ ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎನ್ನುವ ಮಾತೂ ಕೇಳಿ ಬಂದಿತ್ತು. ಈಗ ಸಾಧು ಕೋಕಿಲಾ ಅವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
—-

Be the first to comment