ಮಾರ್ಚ್ 7 ರಂದು “ಜೋಗ್ 101” ತೆರೆಗೆ

 ವಿಜಯ್ ರಾಘವೇಂದ್ರ ಅಭಿನಯದ “ಜೋಗ್ 101” ಚಿತ್ರ ಮಾರ್ಚ್ 7ರಂದು ತೆರೆಗೆ ಬರಲಿದೆ.

ವಿಜಯ್ ಕನ್ನಡಿಗ ನಿರ್ದೇಶನದ “ಜೋಗ್ 101” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಲವ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಇದೆ.

”ಈ ಚಿತ್ರದ ಕಥೆ ಬರೆದು ನಿರ್ಮಾಪಕರ ಹತ್ತಿರ ಹೋದಾಗ ಕಥೆ ಮೆಚ್ಚಿಕೊಂಡು ಚಿತ್ರ ನಿರ್ಮಾಣಕ್ಕೆ ಮುಂದಾದರು. ಈ ಚಿತ್ರದ ಕಥೆಗೆ ವಿಜಯ್ ರಾಘವೇಂದ್ರ ಅವರೆ ಸೂಕ್ತ ಎಂದು ಅಂದುಕೊಂಡಿದ್ದೆವು. ವಿಜಯ್ ರಾಘವೇಂದ್ರ ಅವರು ಕಥೆ ಕೇಳಿ ನಟಿಸಲು ಒಪ್ಪಿಕೊಂಡರು. ಚಿತ್ರ ಇದೇ 7 ನೇ ತಾರೀಖು ಬಿಡುಗಡೆಯಾಗುತ್ತಿದೆ” ಎಂದು ನಿರ್ದೇಶಕ ವಿಜಯ್ ಕನ್ನಡಿಗ ತಿಳಿಸಿದ್ದಾರೆ .

”ನನ್ನ ಚಿತ್ರಗಳಲ್ಲಿ ಒಂದೆರೆಡು ಹಿಟ್ ಹಾಡುಗಳು ಇರುತ್ತಿದ್ದವು. ಆದರೆ ಇತ್ತೀಚಿನ ನನ್ನ ಸಿನಿಮಾಗಳಲ್ಲಿ ಅಂತಹ ಹಿಟ್ ಹಾಡುಗಳು ಯಾವುದು ಇರಲಿಲ್ಲ. “ಜೋಗ್ 101″ ಚಿತ್ರದ ಹಾಡುಗಳು ಆ ಕೊರತೆಯನ್ನು ದೂರ ಮಾಡಿದೆ” ಎಂದಿದ್ದಾರೆ ಚಿತ್ರದ ನಾಯಕ  ವಿಜಯ್ ರಾಘವೇಂದ್ರ.

”ಇದು ನನ್ನ ನಿರ್ಮಾಣದ ಮೊದಲ ಚಿತ್ರ. ಚಿತ್ರತಂಡದ ಸಹಕಾರದಿಂದ “ಜೋಗ್ 101″ ಚೆನ್ನಾಗಿ ಮೂಡಿಬಂದಿದೆ. ಮಾರ್ಚ್‌ 7 ರಂದು ತೆರೆಗೆ ಬರುತ್ತಿರುವ ನಮ್ಮ ಚಿತ್ರವನ್ನು ಎಲ್ಲರೂ ನೋಡಿ ಯಶಸ್ವಿ ಮಾಡಿ” ಎಂದು ನಿರ್ಮಾಪಕ ರಾಘು ತಿಳಿಸಿದ್ದಾರೆ.

ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಮೋಹನ್ ರಂಗಕಹಳೆ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ಈ ಚಿತ್ರಕ್ಕಿದೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ ಚಿತ್ರದ ತಾರಾಬಳಗದಲ್ಲಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!