ಚಿನ್ನ ಕದ್ದ ಖ್ಯಾತ ನಟಿ ಅರೆಸ್ಟ್!

ತೆಲುಗು ಸಿನಿಮಾ ನಟಿ ಸೌಮ್ಯ ಶೆಟ್ಟಿ ಕಳ್ಳತನ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ.

ದೊಂಡಪರ್ತಿ ಬಾಲಾಜಿ ರೆಸಿಡೆನ್ಸಿಯಲ್ಲಿ ನೆಲೆಸಿದ್ದ ಪ್ರಸಾದ್ ಎಂಬ ಸೇನೆಯ ನಿವೃತ್ತ ಅಧಿಕಾರಿ ಮನೆಯಲ್ಲಿ ಕಳ್ಳತನವಾಗಿದ್ದು, ಈ ಪ್ರಕರಣದಲ್ಲಿ ಸೌಮ್ಯ ಶೆಟ್ಟಿ ಅವರನ್ನು ಬಂಧಿಸಲಾಗಿದೆ.

ಪ್ರಸಾದ್ ಅವರ ಮಗಳ ಜೊತೆ ಸೌಮ್ಯ ಶೆಟ್ಟಿ ಸ್ನೇಹ ಬೆಳೆಸಿದ್ದರು. ಕಳೆದ ತಿಂಗಳು ಪ್ರಸಾದ್ ಅವರ ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ ಎಗರಿಸಿಕೊಂಡು ಗೋವಾಕ್ಕೆ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ವಿಷಯ ತಿಳಿದ ಪ್ರಸಾದ್ ಅವರು ಪೊಲೀಸರಿಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದರು. ಸೌಮ್ಯಶೆಟ್ಟಿ ಬಂದು ಮನೆಯಿಂದ ಹೋದ ಬಳಿಕ ಚಿನ್ನಾಭರಣ ಕಾಣಿಸಿಲ್ಲ ಎಂಬ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಕಳ್ಳತನ ಆರೋಪದ ಮೇಲೆ ನಟಿ ಸೌಮ್ಯ ಶೆಟ್ಟಿಯವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ನಟಿಯನ್ನು ಬಂಧಿಸಿರುವ ಪೊಲೀಸರು ಆಕೆಯಿಂದ 74 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇನ್ನುಳಿದ ಚಿನ್ನವನ್ನು ತಮಗೆ ನೀಡಲಾಗದು. ಬಾಕಿ ಚಿನ್ನವನ್ನು ಕೊಡುವಂತೆ ಒತ್ತಾಯ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೊಲೀಸರ ಮುಂದೆ ನಟಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ನಟಿ ಸೌಮ್ಯಾ ಶೆಟ್ಟಿ ಸಿನಿಮಾಗಳಿಗಿಂತ ಹೆಚ್ಚಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದರು. ರೀಲ್ಸ್‌ ಮಾಡಲು ಹಣ ಬೇಕಾದ ಕಾರಣ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೌಮ್ಯ ಶೆಟ್ಟಿ ತೆಲುಗಿನ ‘ಯುವರ್ಸ್ ಲವಿಂಗ್ಲಿ’, ‘ದಿ ಟ್ರಿಪ್’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ಕೆಲ ಕಿರು ಚಿತ್ರಗಳಲ್ಲಿಯೂ ನಟಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!