ಬಿಡುಗಡೆ ತಯಾರಿಯಲ್ಲಿದ್ದಾರೆ `ಲೋಫರ್ಸ್`

ಎ.ಎನ್.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿ.ಎನ್.ಗಂಗಾಧರ್ ಅವರು ನಿರ್ಮಿಸಿರುವ `ಲೋಫರ್ಸ್` ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರವನ್ನು ಸದ್ಯದಲ್ಲೇ ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆಯಿದೆ.  ಎಸ್.ಮೋಹನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ದಿನೇಶ್ ಕುಮಾರ್ ಅವರ ಸಂಗೀತ ನಿರ್ದೇಶನವಿದೆ. ಪ್ರಸಾದ್ ಬಾಬು ಛಾಯಾಗ್ರಹಣ, ಶಿವು ಸಂಕಲನ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಚೇತನ್, ಅರ್ಜುನ್ ಆರ್ಯ, ಮನೋಜ್, ಕೆಂಪೇಗೌಡ, ಶ್ರಾವ್ಯ, ಸುಷ್ಮ, ಸಾಕ್ಷಿ, ಎಂ.ಎಸ್.ಉಮೇಶ್, ಟೆನ್ನಿಸ್ ಕೃಷ್ಣ, ಭಾರತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!