ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ಅಭಿನಯದ ”ಜಸ್ಟ್ ಮ್ಯಾರೀಡ್’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ.
ಎಬಿಬಿಎಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಜಸ್ಟ್ ಮ್ಯಾರೀಡ್ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಸಿ ಆರ್ ಬಾಬಿ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಹೊಣೆ ಹೊತ್ತಿರುವುದಲ್ಲದೆ, ಸಹ-ನಿರ್ಮಾಣ ಮಾಡುತ್ತಿದ್ದಾರೆ.
ದೇವರಾಜ್, ಶ್ರುತಿ ಕೃಷ್ಣ, ಅನೂಪ್ ಭಂಡಾರಿ, ಶ್ರೀಮನ್, ರವಿಶಂಕರ್ ಗೌಡ, ರವಿ ಭಟ್, ಸಾಕ್ಷಿ ಅಗರ್ವಾಲ್, ಶ್ರುತಿ ಹರಿಹರನ್ ಮತ್ತು ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ರೊಮ್ಯಾಂಟಿಕ್ ಡ್ರಾಮಾ ಚಿತ್ರವನ್ನು 20 ದಿನ ಬೆಂಗಳೂರು, ಮೈಸೂರು ಮತ್ತು ಚಿಕ್ಕಮಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ.
”ಜಸ್ಟ್ ಮ್ಯಾರೀಡ್’ ಸಿನಿಮಾದ ಮೂಲಕ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರವು ಆರು ಹಾಡುಗಳನ್ನು ಒಳಗೊಂಡಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಮತ್ತು ವಿಜಯ್ ಪ್ರಕಾಶ್ ಅವರ ಧ್ವನಿಯಾಗಿರುವ ‘ಅಭಿಮಾನಿ ಆಗಿ ಹೋದೆ’ ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿದೆ.
ಚಿತ್ರದ ಕಥೆಯನ್ನು ಸಿಆರ್ ಬಾಬಿ ಬರೆದಿದ್ದಾರೆ. ಧನಂಜಯ್ ಚಿತ್ರಕಥೆ, ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆದಿದ್ದಾರೆ.
—-
Post Views:
129
Be the first to comment