ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ‘ಅಧಿಪತ್ರ’ ಚಿತ್ರದ ಟೀಸರ್ ನ್ನು ಮೇ 10 ರಂದು ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.
‘ಅಧಿಪತ್ರ’ ತುಳು ನಟ, ಬಿಗ್ ಬಾಸ್ ಕನ್ನಡ ಸ್ಪರ್ಧಿಯಾಗಿದ್ದ ರೂಪೇಶ್ ಶೆಟ್ಟಿ ಅವರ ಮೊದಲ ಕನ್ನಡದ ಚಿತ್ರವಾಗಿದೆ. ಚಿತ್ರದಲ್ಲಿ ರೂಪೇಶ್ ಶೆಟ್ಟಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಆ್ಯಂಕರ್, ಕಿರುತೆರೆ ಖ್ಯಾತಿಯ ಜಾಹ್ನವಿ ನಾಯಕಿಯಾಗಿದ್ದಾರೆ.
ಸಸ್ಪೆನ್ಸ್ ಥ್ರಿಲ್ಲರ್ ಅಧಿಪತ್ರವನ್ನು ಚಯನ್ ಶೆಟ್ಟಿ ನಿರ್ದೇಶಿಸಿದ್ದು, ಕೆಎಎಆರ್ ಸಿನಿಕಂಬೈ ಪ್ರೊಡಕ್ಷನ್ಸ್ ನಿರ್ಮಿಸಿದೆ. ಪ್ರಕಾಶ್ ಕೆ ತುಮಿನಾಡು, ರಘು ಪಾಂಡೇಶ್ವರ್, ಎಂಕೆ ಮಾತಾ, ದೀಪಕ್ ರೈ, ಅನಿಲ್ ಉಪ್ಪಲ್ ಮತ್ತು ಪ್ರಶಾಂತ್ ಪ್ರಮುಖ ಪಾತ್ರಗಳಲ್ಲಿದ್ದಾರೆ.
ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿರುವ ‘ಅಧಿಪತ್ರ’ ಶೀಘ್ರದಲ್ಲೇ ತೆರೆಗೆ ಬರಲು ಸಜ್ಜಾಗಿದೆ. ಲಹರಿ ಮ್ಯೂಸಿಕ್ ಸಂಸ್ಥೆಯು ಚಿತ್ರದ ಆಡಿಯೋ ಹಕ್ಕುಗಳನ್ನು ಉತ್ತಮ ಬೆಲೆಗೆ ಪಡೆದುಕೊಂಡಿದೆ.
ರೂಪೇಶ್ ತಮ್ಮ ಚೊಚ್ಚಲ ತಮಿಳು ಚಿತ್ರದಲ್ಲಿ ಯೋಗಿ ಬಾಬು ಜೊತೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಸದ್ಯ ನಿರ್ಮಾಣ ಹಂತದಲ್ಲಿದೆ.
——

Be the first to comment